ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
7 ವರ್ಷದ ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ.

2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್ ಶಾಲೆಯ ಆವರಣದಲ್ಲಿ ಒಟು 14 ವಾಹನಗಳನ್ನು ಚಾಲನೆ ಮಾಡಿದ್ದಾಳೆ.

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನ ತೀರ್ಪುಗಾರ ಸಂತೋಷ್ ಅಗರ್ವಾರ್ ಅವರ ಉಪಸ್ಥಿತಿಯಲ್ಲಿ ರಿಫಾ ತಸ್ಕೀನ್ ವಾಹನ ಚಾಲನೆ ಮಾಡಿದಳು, ಲಾರಿ, ಆಂಬುಲೆನ್ಸ್, ದ್ವಿಚಕ್ರ ವಾಹನ ಹಾಗೂ ಕಾರು ಸೇರಿದಂತೆ 14 ವಿವಿಧ ವಾಹನಗಳನ್ನು ಓಡಿಸಿದ್ದಾಳೆ. ಈ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ಬಹುಚಕ್ರ ವಾಹನ ಚಾಲನೆ ಮಾಡಿದ ಬಾಲಕಿ ಎಂಬ ಕೀರ್ತಿಗೆ ತಸ್ಕಿ ನ್ ಪಾತ್ರಳಾಗಿದ್ದಾಳೆಂದು ಸಂತೋಷ್ಅಗರ್ವಾಲ್ ಅವರು ಘೋಷಣೆ ಮಾಡಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಅಧಿಕೃತ ವೆಬ್ ಸೈಟ್ನಲ್ಲಿ ಬಾಲಕಿಯ ಹೆಸರನ್ನು ಸೇರ್ಪಡೆಗೊಳಿಸಲಾಗುತ್ತದೆ. 2018-19ನೇ ಸಾಲಿನ ವಾರ್ಷಿಕ ನಿಯತಕಾಲಿಕೆಯಲ್ಲೂ ಬಾಲಕಿಯ ಹೆಸರನ್ನು ಪ್ರಕಟಿಸಲಾಗುತ್ತದೆ ಎಂದು ಅಗರ್ವಾಲ್ ಅವರು ತಿಳಿಸಿದ್ದಾರೆ. ದಾಖಲೆ ಬರೆದಿರುವ ರಿಫಾಗೆ ಪ್ರಸ್ತುತ ತಾತ್ಕಾಲಿಕ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಮುಖ್ಯ ಪ್ರಮಾಣಪತ್ರವನ್ನು ಮುಂದಿನ 2 ವಾರಗಳಲ್ಲಿ ನೀಡಲಾಗುತ್ತದೆ. ವಾಹನಗಳ ಸಂಖ್ಯೆಗಳು, ದಾಖಲೆಯ ಪ್ರಾಮುಖ್ಯತೆ ಸೇರಿದಂತೆ ಇನ್ನಿತರೆ ಮಾಹಿತಿಗಳನ್ನು ಸ್ಥಳೀಯ ಸಾರಿಗೆ ಕಚೇರಿಯಿಂದ ಮಾಹಿತಿಗಳನ್ನು ಪಡೆದು, ಸ್ಥಳೀಯ ಶಾಸಕರ ಅನುಮತಿ ಪತ್ರ ಪಡೆದ ಬಳಿಕ ನೀಡಲಾಗುತ್ತದೆ ಎಂದಿದ್ದಾರೆ.
ತಾನು ಬರೆದಿರುವ ದಾಖಲೆಗೆ ಬಾಲಕಿ ರಿಫಾ ಸಂತಸವನ್ನು ವ್ಯಕ್ತಪಡಿಸಿದ್ದು, ಭವಿಷ್ಯದಲ್ಲಿ ನಾನು ಯುದ್ಧ ಪೈಲಟ್ ಆಗಬೇಕೆಂದು ಬಯಸಿದ್ದೇನೆಂದು ಹೇಳಿಕೊಂಡಿದ್ದಾಳೆ, ಭಾರತೀಯ ವಾಯು ಸೇನಗೆ ಸೇರ್ಪಡೆಗೊಳ್ಳಲು ಪುತ್ರಿ ಬಯಸಿದ್ದಾಳೆಂದು ರಿಫಾ ತಂದೆ ತಜುದ್ದೀನ್ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ
ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…