ರೆಸಿಪಿ

15 ನಿಮಿಷಗಳಲ್ಲಿ ಫಟಾಫಟ್ ‘ಎಗ್ ಪಲಾವ್’ ಮಾಡೋದು ಹೇಗೆ ಗೊತ್ತಾ..?

369

ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…

ಬೇಕಾದ ಪದಾರ್ಥಗಳು :

*ಅನ್ನ – 2 ಕಪ್

*ಮೊಟ್ಟೆ- 2

*ಈರುಳ್ಳಿ- 2 (ಕತ್ತರಿಸಿದಂತಹುದು)

*ಬೆಳ್ಳುಳ್ಳಿ- 4 ತುಂಡುಗಳು (ಕತ್ತರಿಸಿದಂತಹುದು)

*ಟೊಮೇಟೊ – 2 (ಕತ್ತರಿಸಿದಂತಹುದು)

*ಹಸಿ ಮೆಣಸಿನಕಾಯಿ- 2 (ಕತ್ತರಿಸಿದಂತಹುದು)

*ತಾಜಾ ಅವರೆ ಕಾಳು – 1/4 ಕಪ್

*ಅರಿಶಿನ ಪುಡಿ- 1/2

*ಖಾರದ ಪುಡಿ- 1 ಟೀ.ಚಮಚ

*ಕರಿ ಮೆಣಸಿನ ಪುಡಿ – 1 ಟೀ.ಚಮಚ

*ಗರಂ ಮಸಾಲ ಪುಡಿ- 1 ಟೀ.ಚಮಚ

*ಉರಿದ ಎಳ್ಳಿನ ಪುಡಿ – 1 ಟೀ.ಚಮಚ

*ಉಪ್ಪು- ರುಚಿಗೆ ತಕ್ಕಷ್ಟು

ತಯಾರಿಸುವ ವಿಧಾನ :

*ಬಾಣಲೆಯ ಮೇಲೆ ಎಣ್ಣೆಯನ್ನು ಹಾಕಿ, ಅದರಲ್ಲಿ ಈರುಳ್ಳಿಗಳನ್ನು ಹಾಕಿಕೊಂಡು ಹೊಂಬಣ್ಣ ಬರುವವರೆಗೆ ಉರಿಯಿರಿ. *ನಂತರ ಕತ್ತರಿಸಿದ ಬೆಳ್ಳುಳ್ಳಿಗಳನ್ನು ಸೇರಿಸಿ, ಕೆಲವು ಕ್ಷಣಗಳವರೆಗೆ ಉರಿಯಿರಿ.

*ಮೊಟ್ಟೆಗಳನ್ನು ಹುಷಾರಾಗಿ ಒಡೆದು, ಬಾಣಲೆಗೆ ಹಾಕಿ. ಮೊಟ್ಟೆಗಳನ್ನು ಚೆನ್ನಾಗಿ ಮಿಶ್ರಣ ಮಾಡುತ್ತ ಬೇಯಿಸಿ.

*ಈಗ ಉಪ್ಪು, ಕರಿ ಮೆಣಸು, ಅರಿಶಿನ ಪುಡಿ, ಖಾರದ ಪುಡಿ, ಹಸಿ ಮೆಣಸಿನ ಕಾಯಿ, ಟೊಮೇಟೊಗಳನ್ನೆಲ್ಲಾ ಹಾಕಿ 3-4 ನಿಮಿಷಗಳ ಕಾಲ ಬೇಯಿಸಿ.

*ಇನ್ನು ಈ ಮಿಶ್ರಣಕ್ಕೆ ಅನ್ನವನ್ನು ಹಾಕಿ ಚೆನ್ನಾಗಿ ಬೆರೆಸಿ. ನಂತರ ಗರಂ ಮಸಾಲ ಪುಡಿಯನ್ನು ಬೆರೆಸಿ, ಚೆನ್ನಾಗಿ ಮಿಶ್ರಣ ಮಾಡಿ.

*ಇದೆಲ್ಲ ಮುಗಿದ ಮೇಲೆ, ಒಲೆಯನ್ನು ಆರಿಸಿ. ಈ ಖಾದ್ಯದ ಮೇಲೆ ಎಳ್ಳು ಪುಡಿಯನ್ನು ಚಿಮುಕಿಸಿ. ಬಿಸಿಯಾಗಿರುವಾಗಲೆ ಬಡಿಸಿ. ಈಗ ನೋಡಿ ರುಚಿ ರುಚಿಯಾದ ಮೊಟ್ಟೆ ಪುಲಾವ್ ನಿಮ್ಮ ಮುಂದೆ ಸಿದ್ಧವಾಗಿರುತ್ತದೆ. ಇದನ್ನು ಸಾರಿನ ಜೊತೆಗೆ ಅಥವಾ ಸಾರಿಲ್ಲದೆ ಬೇಕಾದರು ಸೇವಿಸಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ