ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ ಮಾಗಡಿ ಸಮೀಪದ ಕುಣಿಗಾನಹಳ್ಳಿಯ ನಾರಾಯಣ ಅಲಿಯಾಸ್ ನಾರಾಯಣನನ್ನು ಕೂಡ ಬಂಧಿಸಲಾಗಿದೆ.

ಡಿಯೋ ನವೀನ ಸ್ಕೂಟರ್ ಮತ್ತು ಮೊಪೆಡ್‌ಗಳನ್ನು ರಿಪೇರಿ ಮಾಡುವುದರಲ್ಲಿ ಪಳಗಿದ ಕೈ. ಸಣ್ಣ ವಯಸ್ಸಿನಲ್ಲೇ ಗ್ಯಾರೇಜಿಗೆ ಸೇರಿ ರಿಪೇರಿ ಕೆಲಸ ಕಲಿತಿದ್ದ ಈತ, ಯಾವುದೇ ಕಂಪನಿಯ ಯಾವುದೇ ಸ್ಕೂಟರ್ ಆದರೂ ಕೆಲವೇ ನಿಮಿಷಗಳಲ್ಲಿ ಬಿಚ್ಚಿ ಮತ್ತೆ ಹೊಸದಾಗಿ ಫಿಟ್ ಮಾಡುವಷ್ಟು ಕೆಲಸ ಕಲಿತಿದ್ದ. ಬಹುತೇಕ ಕಂಪನಿಯ ದ್ವಿಚಕ್ರ ವಾಹನಗಳ ಲಾಕ್ ವ್ಯವಸ್ಥೆಯನ್ನು ಚೆನ್ನಾಗಿ ಅರಿತುಕೊಂಡಿದ್ದ.

ಈ ತಿಳಿವಳಿಕೆಯನ್ನೇ ಕಳ್ಳತನಕ್ಕೆ ಬಳಸಿಕೊಂಡ. ಒಂದು ಕಂಪನಿಯ ಲಾಕ್‌ಗೂ ಮತ್ತೊಂದು ಕಂಪನಿಯ ಲಾಕ್‌ಗೂ ಇರುವ ಸಣ್ಣ ಪುಟ್ಟ ವ್ಯತ್ಯಾಸವನ್ನು ತನ್ನ ಮೆಕಾನಿಕ್ ವೃತ್ತಿ ಅನುಭವದಿಂದಲೇ ಕಲಿತಿದ್ದ ,ಈತ ಎಲ್ಲಾ ವಾಹನಕ್ಕೂ ಅನ್ವಯವಾಗುವ ನಕಲಿ ಕೀಯನ್ನು ಸಿದ್ದಪಡಿಸಿಕೊಂಡಿದ್ದ. ಇದೇ ಕೀ ಬಳಸಿ ಸಲೀಸಾಗಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ. ಮಾಗಡಿಯ ಸ್ನೇಹಿತ ನಾರಾಯಣ ಅಲಿಯಾಸ್ ನಾಣಿಯನ್ನು ಕೃತ್ಯಕ್ಕೆ ಜತೆಯಾಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕುರುಬರಹಳ್ಳಿ ಸಮೀಪದ ಸತ್ಯನಾರಾಯಣ ಲೇಔಟ್ ನಿವಾಸಿ ಶರತ್ ಎನ್ನುವವರು ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಆಗಿತ್ತು. ಘಟನಾ ಸ್ಥಳದ ಸುತ್ತ ಮುತ್ತ ಇರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ ಬಳಿಕ ಕೇವಲ 10 ಸೆಕೆಂಡುಗಳಲ್ಲಿ ಸಲೀಸಾಗಿ ನಕಲಿ ಕೀ ಬಳಸಿ ವಾಹನ ಕದ್ದಿದ್ದು ಗೊತ್ತಾಗಿತ್ತು. ಬಳಿಕ ಈತನ ಚಹರೆ ಪತ್ತೆ ಹಚ್ಚಿ ತನಿಖೆ ಮುಂದುವರೆಸಿದಾಗ ಸಿಕ್ಕಿ ಬಿದ್ದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇವರ ಬಂಧನದಿಂದ ಮಹಾಲಕ್ಷ್ಮಿಲೇಔಟ್‌ನ 5 ಪ್ರಕರಣಗಳು ಸೇರಿದಂತೆ ಹನುಮಂತನಗರ, ಬಸವೇಶ್ವರನಗರ, ಬ್ಯಾಡರಹಳ್ಳಿ, ಅನ್ನಪೂರ್ಣೇಶ್ವರಿ ಲೇಔಟ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 23 ವಾಹನ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…