ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ ದೂರವಾಣಿ ಕರೆಯೊಂದು ಬಂದಿದೆ.
ಈ ಮಾಹಿತಿ ಆಧರಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪೊಲೀಸರೊಂದಿಗೆ ಕಲ್ಯಾಣಮಂಟಪಕ್ಕೆ ಹೋಗಿದ್ದಾರೆ. ಆದರೆ ಅಷ್ಟೊತ್ತಿಗೆ ಮಾಂಗಲ್ಯಧಾರಣೆ ಆಗಿ ಹೋಗಿತ್ತು. ಬಾಲಕಿಗೆ 18 ವರ್ಷ ತುಂಬಿರುವ ಬಗ್ಗೆ ದಾಖಲಾತಿ ಒದಗಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮದುಮಗ ಮಹೇಶ್ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಬಾಲಕಿಯನ್ನು ವಶಕ್ಕೆ ಪಡೆದು ಬಾಲಮಂದಿರದಲ್ಲಿ ಆಶ್ರಯ ನೀಡಲಾಗಿದೆ.
ಈ ಸಂದರ್ಭದಲ್ಲಿ ವರದಿ ಮಾಡಲು ಹೋದ ಮಾಧ್ಯಮದವರ ಮೇಲೆ ಬಾಲಕಿಯ ಸಂಬಂಧಿಕರು ಹಲ್ಲೆ ಮಾಡಲು ಯತ್ನಿಸಿದ್ದಾರೆ. ಜೊತೆಗೆ ವಿಡಿಯೋ ಮಾಡದಂತೆ ಧಮ್ಕಿ ಹಾಕಿದ್ದಾರೆ.ಬಾಲ್ಯ ವಿವಾಹದ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಸಿ.ಪುಟ್ಟರಂಗಶೆಟ್ಟಿ, ಬಾಲ್ಯ ವಿಹಾಹಕ್ಕೆ ತಮ್ಮ ತೀವ್ರ ವಿರೋಧವಿದ್ದು ಯಾವುದೇ ಮುಲಾಜಿಲ್ಲದೆ ಪೋಷಕರ ವಿರುದ್ಧ ಕ್ರಮ ಜರುಗಿಸಲು ಪೊಲೀಸರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…
KOLAR NEWS PAPER 27-12-2022