ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 108 ಸುಂದರಿಯರನ್ನು ಹಿಂದಿಕ್ಕಿ ಮಾನುಷಿ ಈ ಸೌಂದರ್ಯ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದಾರೆ.

2000 ಇಸವಿಯಲ್ಲಿ ಪ್ರಿಯಾಂಕಾ ಚೋಪ್ರಾ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದರು.
ಹರಿಯಾಣ ನಿವಾಸಿಯಾದ ಮಾನುಷಿ ವೈದ್ಯಕೀಯ ವಿದ್ಯಾರ್ಥಿನಿ. 20ರ ಹರೆಯದ ಈಕೆ ದೆಹಲಿಯ ಸೇಂಟ್ ಥಾಮಸ್ ಸ್ಕೂಲ್ನಲ್ಲಿ ವಿದ್ಯಾಭ್ಯಾಸ ಮುಗಿಸಿ ಭಗತ್ ಫೂಲ್ ಸಿಂಗ್ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. . ಈಕೆಯ ಪೋಷಕರೂ ವೈದ್ಯರು.

ಮಾನುಷಿ ಕೂಚಿಪುಡಿ ನೃತ್ಯ ಪರಿಣಿತೆ. ಅಷ್ಟೇ ಅಲ್ಲ, ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದು, ಪ್ರಾಜೆಕ್ಟ್ ಶಕ್ತಿ ಎಂಬ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರಲ್ಲಿ ಋತುಸ್ರಾವದ ಸಮಯದಲ್ಲಿ ನೈರ್ಮ ಲ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. 20 ಗ್ರಾಮಗಳಿಗೆ ಭೇಟಿ ನೀಡಿ, 5000 ಮಹಿಳೆಯರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಈ ಸ್ಪರ್ಧೆಯಲ್ಲಿ ಬ್ಯೂಟಿ ವಿತ್ ಎ ಪರ್ಪಸ್ ಎಂಬ ಪಟ್ಟವನ್ನೂ ಮಾನುಷಿ ತಮ್ಮದಾಗಿಸಿಕೊಂಡಿದ್ದಾರೆ. ಇಂಗ್ಲೆಂಡ್ನ ಸ್ಟೆಫಾನಿ ಹಿಲ್ ಮೊದಲ ರನ್ನರ್ ಅಪ್ ಮತ್ತು ಮೆಕ್ಸಿಕೊದ ಆಂಡ್ರಿಯಾ ಮೇಜಾ ದ್ವಿತೀಯ ರನ್ನರ್ ಅಪ್ ಸ್ಥಾನ ಗಳಿಸಿದ್ದಾರೆ. ಸ್ಪರ್ಧೆಯ ಪ್ರಶ್ನೋತ್ತರ ಸುತ್ತಿನಲ್ಲಿ ಯಾವ ವೃತ್ತಿಗೆ ಹೆಚ್ಚಿನ ಸಂಬಳಕ್ಕೆ ಅರ್ಹ ಮತ್ತು ಯಾಕೆ ಎಂಬ ಪ್ರಶ್ನೆಯನ್ನು ಮಾನುಷಿಯವರಲ್ಲಿ ಕೇಳಲಾಗಿತ್ತು.
ಸಂಬಳದ ಪ್ರಶ್ನೆ ಅಲ್ಲ ಆದರೆ ಅತೀ ಹೆಚ್ಚು ಗೌರವ ಗಳಿಸುವವಳು ಅಮ್ಮ ಎಂದು ಮಾನುಷಿ ಉತ್ತರಿಸಿದ್ದಾಳೆ.

ಈ ಹಿಂದೆ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2017 ರಲ್ಲೂ ಮಾನುಷಿ ಗೆದ್ದಿದ್ದಳು. ಚೀನಾ ಸಾನ್ಯಾ ನಗರದಲ್ಲಿ ನಡೆದ ಸಮಾರಂಭದಲ್ಲಿ 2016ರ ಪೋಟೋì ರಿಕೋದ ಸ್ಟೆಫಾನಿ ಡೆಲ್ ವಾಲೆಯಿಂದ ಕಿರೀಟವನ್ನು ಮಾನುಷಿ ಮುಡಿಗೇರಿಸಿಕೊಂಡಿದ್ದಾರೆ.
ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ಕ್ ಮಾಡಿ:https://youtu.be/E8B1c3NpLpc
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಸ್ಮಾರ್ಟ್ಫೋನ್ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್ಫೋನ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್ಲೋಡ್, ಆಫ್ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್ಅನ್ನು ಲಾಕ್…
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.