ಸುದ್ದಿ

170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

53

ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು.

ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ, ತಮಿಳ್ನಾಡಿನಾದ್ಯಂತ ಕೃಷಿಯಲ್ಲಿ ಸ್ಥಳೀಯ ಶೈಲಿಯ ಅಳವಡಿಕೆ ಮತ್ತು ಬೀಜ ಪ್ರಭೇದಗಳನ್ನು ಉತ್ತೇಜಿಸುವ ಕೆಲಸದಲ್ಲಿ ಜಯರಾಮನ್ ತೊಡಗಿಸಿಕೊಡಿದ್ದರು. ತಿರುವರೂರು ಜಿಲ್ಲೆಯ ಅದಿರಂಗಂ ಜಿಲ್ಲೆಯು ಜಯರಾಮನ್ ಅವರ ಕಾರಣದಿಂದಾಗಿಯೇ 2006 ರಿಂದ ‘ನೆಲ್ ತಿರುವಿಳ’ ಎಂಬ ವಾರ್ಷಿಕ ಭತ್ತದ ಉತ್ಸವಕ್ಕೆ ಹೆಸರುವಾಸಿಯಾಗಿದೆ. ರಾಜ್ಯದೆಲ್ಲೆಡೆಯಿಂದ ಮತ್ತು ಹತ್ತಿರದ ಸ್ಥಳಗಳಿಂದ ಬರುವ ರೈತರು ಈ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಕಳೆದ ವರ್ಷ ಸುಮಾರು 12 ಸಾವಿರ ರೈತರು ಹಬ್ಬದಲ್ಲಿ ಭಾಗಿಯಾಗಿದ್ದರು.

ಜಯರಾಮನ್ ಅವರು ಸದ್ದಿಲ್ಲದೆ ಭತ್ತದ ಕೃಷಿಯಲ್ಲಿ ಕ್ರಾಂತಿ ಮಾಡಿದ ಬಗೆಯೇ ಕುತೂಹಲಕಾರಿ. ಪ್ರತಿದಿನವೂ 2 ಕಿ.ಗ್ರಾಂ ಬೀಜಗಳನ್ನು ನೀಡಿ, ಮುಂದಿನ ವರ್ಷ 4 ಕಿ.ಗ್ರಾಂ ಮರಳಿಸುವಂತೆ ಕೇಳುವ ಮೂಲಕ ಅವರು ಸ್ಥಳೀಯ ಬೀಜ ಪ್ರಭೇದಗಳ ಪುನಶ್ಚೇತನದ ಕೆಲಸ ಶುರು ಮಾಡಿದರು. ತಿರವರೂರು ವಾರ್ಷಿಕ ಉತ್ಸವಕ್ಕೆ ಈ ಬಗೆಯಲ್ಲಿ ಒಬ್ಬೊಬ್ಬರಿಂದಲೂ 4 ಕಿ.ಗ್ರಾಂಗಿಂತಲೂ ಹೆಚ್ಚು ಬೀಜ ಮರಳತೊಡಗಿತು. ಇದರ ಪರಿಣಾಮವಾಗಿ ಈ ಉತ್ಸವವು ತಮಿಳುನಾಡಿನ ರೈತರಿಗೆ ಒಂದು ಪ್ರಮುಖ ವೇದಿಕೆಯೇ ಆಗಿ ಮಾರ್ಪಟ್ಟಿತು.

ರಾಜ್ಯ ಸರ್ಕಾರದಿಂದ ಜಯರಾಮನ್ ಅವರಿಗೆ ಸತತ ಎರಡು ವರ್ಷ (2012 ಮತ್ತು 2013) ‘ಅತ್ಯುತ್ತಮ ಸಾವಯವ ಕೃಷಿಕ’ ಪ್ರಶಸ್ತಿ ಸಂದಿದೆ. 2015ರಲ್ಲಿ ಅವರು ನ್ಯಾಷನಲ್ ಇನೋವೇಶನ್ ಫೌಂಡೇಶನ್ (ಎನ್ಐಎಫ್)ಕೊಡುವ ‘ಬೆಸ್ಟ್ ಜೀನೋಮ್ ಸಂರಕ್ಷಕ’ ಪ್ರಶಸ್ತಿಯನ್ನು ಗೆದ್ದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ವೃಷಭಾವತಿ ಉಳಿಸಿ‌’ ಅಭಿಯಾನಕ್ಕೆ ಮತ್ತು ಮ್ಯಾರಥಾನ್ ನಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್ ಸಾಥ್…!

    ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ‌ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….

  • Uncategorized

    ಬಿಸಿಲು ಬಿಸಿಲು ಬಿಸಿಲು…!!!

    ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

  • ಉಪಯುಕ್ತ ಮಾಹಿತಿ

    ನೀವು ಮದುವೆಯಾಗುವ ಹುಡುಗಿಯ ಕಾಲಿನ ಎರಡನೆಯ ಬೆರಳು ಉದ್ದವಿದ್ದರೆ ಏನಾಗುತ್ತದೆ ಗೊತ್ತಾ..!

    ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…

  • ಸ್ಪೂರ್ತಿ

    ಟೀ ಮಾಡಿಕೊಂಡೇ ಲಕ್ಷಾಂತರ ಹಣ ಮಾಡುತ್ತಿದ್ದಾನೆ ಈತ..!

    ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…

  • ಉಪಯುಕ್ತ ಮಾಹಿತಿ

    ನಿಜವಾದ ಬಡವ, ಶ್ರೀಮಂತ ಎಂದ್ರೆ ಯಾರೂ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.