ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು.
ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ ಒಡಿಶಾಕ್ಕೆ ಕಳುಹಿಸಲಾಗಿದೆ.
ಮೊದಲಿಗೆ ಸೋನು ಸೂದ್ ಕೇರಳದ ಕೊಚ್ಚಿ ಮತ್ತು ಒಡಿಶಾದ ಭುವನೇಶ್ವರ ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಆಯಾ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲಿಂದ ಅನೇಕ ಬಗೆಯ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ನಂತರ ಬೆಂಗಳೂರಿನಿಂದ ಕೊಚ್ಚಿಗೆ ವಿಶೇಷ ವಿಮಾನ ರವಾನಿಸಲು ವ್ಯವಸ್ಥೆ ಮಾಡಿದ್ದಾರೆ. ಈ ವಿಮಾನದ ಮೂಲಕ 177 ಯುವತಿಯರನ್ನು ಒಡಿಶಾಕ್ಕೆ ಕಳುಹಿಸಿದ್ದಾರೆ. ಈ ಮೂಲಕ ಯುವತಿಯರು ಅವರ ಕುಟುಂಬವನ್ನು ಸೇರಲು ಸೋನು ಸೂದ್ ನೆರವಾಗಿದ್ದಾರೆ.