ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ಉತ್ತರ, ದಕ್ಷಿಣ ಮತ್ತು ಪಶ್ಚಿಮದಲ್ಲಿ ಬಾಂಗ್ಲಾದೇಶದಿಂದ ಸುತ್ತುವರಿಯಲ್ಪಟ್ಟಿರುವ ತ್ರಿಪುರದ ಪೂರ್ವಕ್ಕೆ ಅಸ್ಸಾಂ ಮತ್ತು ಮಿಝೊರಾಮ್‌ಗಳಿವೆ.
ಮಾಣಿಕ್ ಸರ್ಕಾರ್ ಇವರು 1998 ರಿಂದ ಇಲ್ಲಿಯ ವರೆಗೂ ಸೋತಿದ್ದೆ ಇಲ್ಲ ಮತ್ತು ಅಧಿಕಾರದಿಂದ ಕೆಳಗೆ ಇಳಿದೇಯಿಲ್ಲ ತನಗೆ ಬರುವ ಸಂಭಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ 5 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿರುವ ಇವರು ಭಾರತ ದೇಶದ 3ನೇ ಸಣ್ಣ ರಾಜ್ಯ ತ್ರಿಪುರಾದ ಮುಖ್ಯಮಂತ್ರಿ.
ಇವರು ಕಮ್ಯುನಿಸ್ಟ್ (Marxist) ಪಾರ್ಟಿಯವರು, 2013 ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದು 4ನೇ ಭಾರಿಗೆ ಮುಖ್ಯಮಂತ್ರಿ ಆದರು.
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನ:-
ಮಾಣಿಕ್ ಸರ್ಕಾರ್ 1949 ಜನವರಿ 22 ರಂದು, ರಾಧಕಿಶೋರ್ ಪುರದಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಅವರ ತಂದೆ ಅಮೂಲ್ಯ ಸರ್ಕಾರ್ ಒಬ್ಬ ಟೈಲರ್. ತಾಯಿ ಅಂಜಲಿ ಸರ್ಕಾರ್ ರಾಜ್ಯ ಸರ್ಕಾರದ ನೌಕರಿಯಲ್ಲಿದ್ದರು. ಮಾಣಿಕ್ ಸರ್ಕಾರ್ ಎಮ್ ಬಿ ಬಿ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ. ಅವರು ವಿದ್ಯಾರ್ಥಿ ಜೀವನದಲ್ಲಿ ವಿಧ್ಯಾರ್ಥಿ ಸಂಘಟನೆಯ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದರು. ಎಮ್ ಬಿ ಬಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಎಸ್ ಎಪ್ ಐ (ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ) ಸಂಘಟನೆಯ ಅಖಿಲ ಭಾರತ ಉಪಾದ್ಯಕ್ಷರಾಗಿದ್ದರು.
ತನ್ನ 19 ನೇ ವಯಸ್ಸಿನಲ್ಲೇ ಅಂದರೆ 1968 ರಲ್ಲಿ ಸಿಪಿಐ(ಎಂ) ಪಕ್ಷದ ಸದಸ್ಯರಾದರು. 1972 ರಲ್ಲಿ ತನ್ನ 23ನೇ ವಯಸ್ಸಿನಲ್ಲಿ, ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಸದಸ್ಯರಾದರು. ರಾಜ್ಯ ಸಮಿತಿ ಸದಸ್ಯರಾದ 6 ವರ್ಷಗಳ ನಂತರ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದರು. ತಮ್ಮ 31 ನೇ ವಯಸ್ಸಿನಲ್ಲಿ ಅಂದರೆ, 1980 ರಲ್ಲಿ, ಅಗರ್ತಲಾ ಕ್ಷೇತ್ರದಿಂದ ವಿದಾನ ಸಭೆಗೆ ಆಯ್ಕೆಯಾದರು. 1993 ರಲ್ಲಿ ರಾಜ್ಯದಲ್ಲಿ ಎಡರಂಗ ಸರ್ಕಾರ ಅಧಿಕಾರದಲ್ಲಿದ್ದಾಗ, ಸರ್ಕಾರ್, ಪಕ್ಷದ ರಾಜ್ಯ ಕಾರ್ಯದರ್ಶಿಯಾದರು. 1998 ರಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಮಾಣಿಕ್ ಸರ್ಕಾರ್ ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾದರು. ಆಗ ಅವರ ವಯಸ್ಸು 49 ವರ್ಷ. ಅದೇ ವರ್ಷದಲ್ಲಿ ಅವರು ಸಿಪಿಐ(ಎಂ) ಪಕ್ಷದ ಪೊಲಿಟ್ ಭ್ಯೂರೋ ಸದಸ್ಯರಾದರು.
ಸರಳ ಜೀವನ:-
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನವನ್ನು ನೋಡಿದರೆ ಮತ್ತಷ್ಟು ಅಚ್ಚರಿಗೊಳಗಾಗುತ್ತೇವೆ! ಭಾರತದ ಪರಿಶುದ್ಧ ಮತ್ತು ಅತಿ ಬಡ ಮುಖ್ಯಮಂತ್ರಿ (ಬಹುಶಃ ಬಡ ರಾಜಕಾರಣಿ!) ಮಾಣಿಕ್ ಸರ್ಕಾರ್! ಅವರು ಘೋಷಿಸಿಕೊಂಡಿರುವ ಆಸ್ತಿಯ ಒಟ್ಟು ಮೌಲ್ಯ ಎರಡೂವರೆ ಲಕ್ಷಕ್ಕಿಂತಲೂ ಕಡಿಮೆ. ಅದರಲ್ಲಿ ಅವರ ತಾಯಿಯಿಂದ ಬಂದ ಒಂದು ಮನೆ ಕೂಡ ಸೇರಿದೆ. 2013ರ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನ ಅವರ ಬಳಿಇದ್ದ ಹಣ 1080 ಮಾತ್ರ, ಬ್ಯಾಂಕಿನಲ್ಲಿದ್ದ ಠೇವಣಿ 9720/-! ದೇಶದಲ್ಲಿ ಅತಿ ಕಡಿಮೆ ಸಂಬಳ (9200/-) ಪಡೆಯುತ್ತಿರುವ ಮಾಣಿಕ್ ಸರ್ಕಾರ್ ಆ ಸಂಬಳವನ್ನೂ ಪಕ್ಷಕ್ಕೆ ನೀಡಿ ಪಕ್ಷದ ಇತರೆ ಕಾರ್ಯಕರ್ತರಂತೆ ಐದು ಸಾವಿರ ರುಪಾಯಿಗಳನ್ನು ಪಡೆಯುತ್ತಿದ್ದಾರೆ.
ಇನ್ನು ಮುಖ್ಯಮಂತ್ರಿಯ ಜೀವನ ನಿರ್ವಹಣೆ ನಡೆಯುತ್ತಿರುವುದು ಸರಕಾರಿ ಕೆಲಸದಲ್ಲಿದ್ದ ಅವರ ಮಡದಿ ನಿವೃತ್ತರಾದಾಗ ಬಂದ ಪಿಎಫ್ ಮತ್ತಿತರ ಹಣವನ್ನು (24 ಲಕ್ಷ) ಬ್ಯಾಂಕಿನಲ್ಲಿ ಠೇವಣಿರೂಪದಲ್ಲಿಟ್ಟು ಅದರಿಂದ ಬರುವ ಬಡ್ಡಿಯಿಂದ!
ಈ ರಾಜ್ಯದ ಅಧಿಕಾರ ಅವಧಿ 2018ಕ್ಕೆ ಮುಗಿಯುವುದರಿಂದ ಕರ್ನಾಟಕದ ಜೊತೆಯಲ್ಲಿಯೇ ಚುನಾವಣೆ ಬರಬಹುದು. ಮಾಣಿಕ್ ಸರ್ಕಾರ್ ಅವರ ಸರ್ಕಾರವನ್ನು ಸೋಲಿಸುವ ಪ್ರಯತ್ನ ಅಲ್ಲಿನ ಪ್ರತಿಪಕ್ಷಗಳಿಗೆ ಬಾರಿ ಕಷ್ಟದ ಕೆಲಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.