ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್.
ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ ಕುಟುಂಬ.42 ವರ್ಷದ ಶು ಪ್ರಕಾರ, ಹೊಸ ಮಗುವಿನ ಸ್ವಾಗತಕ್ಕೆ ಮನೆಯವರೆಲ್ಲ ಸಿದ್ಧರಾಗಿದ್ದರಂತೆ. ಬೋನಿ ನಮ್ಮ ಕುಟುಂಬವನ್ನು ಕಂಪ್ಲೀಟ್ ಮಾಡಿದ್ದಾಳೆ ಎಂದು ಹೇಳಿ ಸಂಭ್ರಮಿಸಿದ್ದಾರೆ.
ಶು 14 ವರ್ಷದಲ್ಲಿರುವಾಗ ಮೊದಲ ಮಗುವಿಗೆ ಜನ್ಮ ನೀಡಿದ್ದಳಂತೆ. ಮದುವೆ ನಂತ್ರ ಕೆಲವರು ಮೂರು ಮಕ್ಕಳನ್ನು ಪಡೆಯುವಂತೆ ಸಲಹೆ ನೀಡಿದ್ದರಂತೆ. ನಾವು ಎರಡು ಅಥವಾ ಮೂರು ಮಗುವನ್ನು ಪಡೆಯಲು ಮಾತ್ರ ನಿರ್ಧರಿಸಿದ್ದೇವು. ಆದರೆ ನಾವು ಈಗ 21 ಮಗುವನ್ನು ಪಡೆದಿದ್ದೇವೆ.ಮದುವೆಯಾಗಿ 28 ವರ್ಷಕ್ಕೆ 21 ಮಕ್ಕಳನ್ನು ಹೆತ್ತಿದ್ದಾಳೆ.
ರಾಡ್ಫೋರ್ಡ್ ಹಾಗೂ ಆಕೆಯ ಪತಿ ಮೋರ್ ಕ್ಯಾಂಬೇಯಲ್ಲಿ ಮಕ್ಕಳ ಸಹಾಯದಲ್ಲಿ ಬೇಕರಿ ನಡೆಸುತ್ತಿದ್ದಾರೆ. ನಾನು ಮತ್ತೆ ಗರ್ಭಿಣಿಯಾಗುವುದನ್ನು ಮಿಸ್ ಮಾಡುತ್ತೇನೆ ಎಂದಿದ್ದಾರೆ.ರಾಡ್ಫೋರ್ಡ್ ಹಾಗೂ ಆಕೆಯ ಪತಿ ಮೋರ್ ಕ್ಯಾಂಬೇಯಲ್ಲಿ ಮಕ್ಕಳ ಸಹಾಯದಲ್ಲಿ ಬೇಕರಿ ನಡೆಸುತ್ತಿದ್ದಾರೆ. ನಾನು ಮತ್ತೆ ಗರ್ಭಿಣಿಯಾಗುವುದನ್ನು ಮಿಸ್ ಮಾಡುತ್ತೇನೆ ಎಂದಿದ್ದಾರೆ.ಮೊದಲ ಮಗಳಿಗೆ ಮೂರು ಮಕ್ಕಳಿದ್ದು, ಈಗಾಗಲೇ ಶು ಅಜ್ಜಿಯಾಗಿದ್ದಾಳೆ.
21 ಮಕ್ಕಳು ಸಾಕು. ಇನ್ಮುಂದೆ ಮಕ್ಕಳು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಾಳಂತೆ. ಗರ್ಭಿಣಿ ಸಮಯವನ್ನು ಮಿಸ್ ಮಾಡಿಕೊಳ್ತೇನೆ ಎನ್ನುತ್ತಾಳೆ ಶು.
ಈ ಬಾರಿ ಆಸ್ಪತ್ರೆಗೆ ಹೋದಾಗ, ಮುಂದಿನ ವರ್ಷ ಬರ್ತಿರಾ ಎಂದು ಸಿಬ್ಬಂದಿ ಕೇಳಿದ್ದರಂತೆ. ಇದಕ್ಕೆ ಇಲ್ಲವೆಂದು ಶು ಉತ್ತರಿಸಿದ್ದಾಳಂತೆ. ವಿಶೇಷವೆಂದ್ರೆ ಹಿಂದಿನ ವರ್ಷ 20ನೇ ಮಗು ಜನಿಸಿದಾಗ ಕೂಡ ಶು ಇದೇ ಉತ್ತರ ನೀಡಿದ್ದಳಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.