ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.

ದಿನದ 24 ಗಂಟೆಯೂ ವಿದ್ಯುತ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಹಮ್ಮಿಕೊಂಡಿದೆ. ವಿದ್ಯುತ್ ಖೋತಾ ಮಾಡಿದಲ್ಲಿ 2019ರ ಏಪ್ರಿಲ್ ನಿಂದ ವಿತರಕರಿಗೇ ದಂಡ ಹಾಕಲಾಗುತ್ತದೆ. ಅಷ್ಟೇ ಅಲ್ಲ ವಿದ್ಯುತ್ ಕಳವು ತಡೆಯಲು ಸ್ಮಾರ್ಟ್ ಮೀಟರ್ ಗಳನ್ನು ಅಳವಡಿಸಲು ಚಿಂತನೆ ನಡೆದಿದೆ.

2018ರ ಅಂತ್ಯದ ವೇಳೆಗೆ ಸರ್ವರಿಗೂ ವಿದ್ಯುತ್ ಪೂರೈಸಲು 16,000 ಕೋಟಿ ರೂ. ವೆಚ್ಚದಲ್ಲಿ ಸೌಭಾಗ್ಯ ಸ್ಕೀಮ್ ಅನ್ನು ಕೂಡ ಲಾಂಚ್ ಮಾಡಲಾಗಿತ್ತು. 2019ರ ಮಾರ್ಚ್ ವೇಳೆಗೆ ದೇಶಾದ್ಯಂತ ದಿನದ 24 ಗಂಟೆಯೂ ವಿದ್ಯುತ್ ನೀಡುವುದು ನಮ್ಮ ಉದ್ದೇಶ. ಮಾರ್ಚ್ ಬಳಿಕ ವಿನಾಕಾರಣ ಲೋಡ್ ಶೆಡ್ಡಿಂಗ್ ಮಾಡಿದ್ರೆ ವಿತರಕರಿಗೆ ದಂಡ ಹಾಕುವುದಾಗಿ ಇಂಧನ ಸಚಿವ ಆರ್.ಕೆ.ಸಿಂಗ್ ಈ ವಿಷಯವನ್ನು ತಿಳಿಸಿದ್ದಾರೆ.

ತಾಂತ್ರಿಕ ದೋಷ ಅಥವಾ ಪ್ರಕೃತಿ ವಿಕೋಪಗಳ ಕಾರಣಗಳನ್ನು ಹೊರತುಪಡಿಸಿ, ಸುಖಾ ಸುಮ್ಮನೆ ವಿದ್ಯುತ್ ಕಡಿತಗೊಳಿಸಿದರೆ, ವಿದ್ಯುತ್ ಪೂರೈಕೆದಾರರಿಗೆ ದಂಡ ವಿಧಿಸಲಾಗುತ್ತದೆ.ವಿದ್ಯುತ್ ಮೀಟರ್, ಬಿಲ್ ಪಾವತಿ ಎಲ್ಲವನ್ನೂ ಡಿಜಿಟಲೀಕರಣ ಮಾಡುವ ಉದ್ದೇಶ ಸರ್ಕಾರಕ್ಕಿದೆ. ಅದಕ್ಕಾಗಿ ಪ್ರಿ ಪೇಯ್ಡ್ ಮೀಟರ್ ಅಳವಡಿಸಲು ಎಲ್ಲಾ ರಾಜ್ಯಗಳು ಇದಕ್ಕೆ ಸಮ್ಮತಿಸಿವೆ. ವಿದ್ಯುತ್ ಪೂರೈಕೆಗೆ ತಕ್ಕಂತೆ ಶುಲ್ಕ ವಸೂಲಿ ಆಗುತ್ತಿಲ್ಲ. ಹಾಗಾಗಿ ಈ ಕ್ರಮ ಅನಿವಾರ್ಯ ಅಂತಾ ಸಚಿವರು ತಿಳಿಸಿದ್ದಾರೆ.

ಪ್ರೀ ಪೇಯ್ಡ್ ಮೀಟರ್ ಅಳವಡಿಕೆ ಹಾಗೂ ಫಲಾನುಭವಿಗಳಿಗೆ ನೇರ ಲಾಭ ವರ್ಗಾಯಿಸಲು ಹಾಗೂ 24×7 ವಿದ್ಯುತ್ ಪೂರೈಸಲು ದೇಶದ ಬಹುತೇಕ ರಾಜ್ಯಗಳು ಒಪ್ಪಿವೆ, ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ಮುಂದೆ ಮೀಟರಿಂಗ್, ಬಿಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಮಾನವ ಸಂಪರ್ಕವಿಲ್ಲದಂತೆ ಮಾಡಲಾಗುವುದು. ಮೊಬೈಲ್ ಮೂಲಕವೇ ವಿದ್ಯುತ್ ಬಿಲ್ ಕಟ್ಟುವ ವ್ಯವಸ್ಥೆ ಮಾಡಲಾಗುವುದು. ಆದರೆ, ಈ ಕಾರ್ಯಕ್ಕೆ ಯಾವುದೇ ಕಾಲ ಮಿತಿ ನಿಗದಿಗೊಳಿಸಿಲ್ಲ. ಅಲ್ಲದೇ ಪೂರೈಕೆದಾರರಿಗೆ ಆಗುವ ನಷ್ಟವನ್ನು ಸರಿದೂಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ, ಸಚಿವರು ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್‌ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್‍ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್‍ಶಾಪ್‍ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…