ಸಿನಿಮಾ

3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ, ನಟ ಯಶ್’ಗೆ ಕೋರ್ಟ್ ಆದೇಶ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

By admin

April 18, 2018

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.

ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.

9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.

ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.