ಸಿನಿಮಾ

32 ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿ, ಇಪ್ಪತ್ತೈದು ವರ್ಷಗಳಿಂದ ಥಿಯೇಟರ್ಗೆ ಕಾಲಿಟ್ಟಿಲ್ಲದ ನಟ..!ತಿಳಿಯಲು ಇದನ್ನು ಓದಿ ..

427

ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್​ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..

ಕಳೆದ 32 ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿರುವ ಅವರು, ಈವರೆಗೆ ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ಹಾಸ್ಯನಟನಾಗಿ ಎಲ್ಲರನ್ನೂ ನಗಿಸುತ್ತಿದ್ದಾರೆ. ಅವರ ಕಾಮಿಡಿ ನೋಡಲೆಂದೇ ಪ್ರೇಕ್ಷಕರು ಮುಗಿ ಬೀಳುತ್ತಾರೆ. ಆದರೆ ಅವರಿಗೆ ಸಿನಿಮಾ ನೋಡಬೇಕು ಎಂದು ಅನ್ನಿಸುವುದೇ ಇಲ್ಲವಂತೆ.

ಕಾರಣ ಏನು ಗೊತ್ತಾ..?

ಇದಕ್ಕೆ ಕಾರಣ ನೀಡುವ ಅವರು, ‘ನಟನೆ ನನ್ನ ವೃತ್ತಿ. ಹೀಗಾಗಿ ನಾನು ಅದನ್ನು ಪ್ರೀತಿಸುತ್ತೇನೆ. ಆದರೆ 3 ಗಂಟೆ ಕೂತು ಚಿತ್ರ ನೋಡುವುದು ತುಂಬ ಕಷ್ಟದ ವಿಚಾರ.

ಸಿನಿಮಾಗಳು ನನಗೆ ಅಸ್ವಾಭಾವಿಕವಾಗಿ ಕಾಣುತ್ತವೆ. ಹೀಗಾಗಿ ನಾನು ಥಿಯೇಟರ್​ಗೆ ಹೋಗುವುದೇ ಇಲ್ಲ. ಈ ವಿಚಾರ ಹೇಳಿಕೊಂಡರೆ ಜನ ನಂಬುವುದಿಲ್ಲ’ ಎಂದಿದ್ದಾರೆ. ಅವರಿಗೆ ನಾಟಕ ಎಂದರೆ ತುಂಬ ಇಷ್ಟವಂತೆ. ಬಿಡುವು ಸಿಕ್ಕಾಗೆಲ್ಲ ನಾಟಕಗಳನ್ನು ನೋಡುತ್ತಾರಂತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

    ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…

  • ಉಪಯುಕ್ತ ಮಾಹಿತಿ

    ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

    ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಉಪಯುಕ್ತ ಮಾಹಿತಿ, ತಂತ್ರಜ್ಞಾನ

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

  • ಸುದ್ದಿ

    ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

    ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…