ವಿಚಿತ್ರ ಆದರೂ ಸತ್ಯ

34 ಬಾರಿ ಹಾವು ಕಚ್ಚಿದರೂ ಬದುಕುಳಿದ 18ರ ಯುವತಿ ..!ತಿಳಿಯಲು ಈ ಲೇಖನ ಓದಿ..

361

ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.

‘ಕಳೆದ ಮೂರು ವರ್ಷಗಳ ಅಂತರದಲ್ಲಿ 30ಕ್ಕೂ ಹೆಚ್ಚು ಬಾರಿ ನನಗೆ ಹಾವು ಕಚ್ಚಿದೆ. ನಾನು ಹಾವು ಕಂಡ ತಕ್ಷಣ ಅದರ ಜತೆ ಆಟವಾಡಲು ಆರಂಭಿಸುತ್ತೇನೆ. ತಕ್ಷಣ ಹಾವು ನನಗೆ ಕಚ್ಚುತ್ತದೆ. ನಾನು ಶಾಲಾ ದಿನಗಳಲ್ಲಿ ಓದುತ್ತಿದ್ದಾಗ ಹಲವು ಹಾವುಗಳು ನನಗೆ ಕಚ್ಚಿವೆ. ಒಮ್ಮೊಮ್ಮೆ ದಿನಕ್ಕೆ ಎರಡು ಮೂರು ಬಾರಿ ಹಾವುಗಳೂ ಕಚ್ಚಿದ್ದಿದೆ.

ಜ್ಯೋತಿಷಿಗಳು ನನಗೆ ದೇವರ ಜತೆ ಸಂಬಂಧ ಇದೆ ಎನ್ನುತ್ತಾರೆ,’ ಎಂದು ಹೇಳುತ್ತಾಳೆ ಯುವತಿ. ವಿವಿಧ ಆಸ್ಪತ್ರೆಗಳಲ್ಲಿರುವ ದಾಖಲೆಗಳ ಪ್ರಕಾರ ಇದೇ ಫೆಬ್ರವರಿ 18ಕ್ಕೆ ಆಕೆ 34ನೇ ಬಾರಿ ಹಾವಿನಿಂದ ಕಚ್ಚಿಸಿಕೊಂಡಿದ್ದಾಳೆ. ಆದರೆ ಇದಕ್ಕೆ ವೈದ್ಯರು ಹೇಳುವುದೇ ಬೇರೆ. ಹಲವು ಬಾರಿ ವಿಷವಿಲ್ಲದ ಹಾವುಗಳು ಆಕೆಗೆ ಕಚ್ಚಿವೆ.

ಕೆಲವೊಮ್ಮೆ ವಿಷ ಕಡಿಮೆ ಇರುವ ಹಾವುಗಳು ಕಚ್ಚಿದ್ದರಿಂದ ಇವಳಿಗೆ ಏನೂ ಆಗಿಲ್ಲ ಎನ್ನುತ್ತಾರೆ. ಒಟ್ಟಾರೆ ಯುವತಿ ಮಾತ್ರ ಇನ್ನೂ ಬದುಕಿದ್ದಾಳೆ.

ವೈದ್ಯಕೀಯ ದಾಖಲೆಗಳ ಪ್ರಕಾರ ಆಕೆಗೆ 34 ಬಾರಿ ಹಾವು ಕಚ್ಚಿದ್ದಂತೂ ನೂರಕ್ಕೆ ನೂರು ಸತ್ಯ. ಇನ್ನು ಕೆಲವರು ನಿರಂತರವಾಗಿ ಹಾವು ಕಚ್ಚುತ್ತಿರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಉತ್ಪತ್ತಿಯಾಗಿ ಮುಂದಿನ ಬಾರಿ ಕಚ್ಚಿದಾಗ ಏನೂ ಆಗದಂತೆ ತಡೆಯುತ್ತದೆ. ಇದರಿಂದ ಆಕೆಗೆ ಏನೂ ಆಗುತ್ತಿಲ್ಲ ಎನ್ನುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    16ರ ಬಾಲಕಿಗೆ ಬಾಲ್ಯ ವಿವಾಹ ಸಂಬ್ರಮ – ಮದುಮಗ ಸೇರಿದಂತೆ 6 ಮಂದಿ ಅರೆಸ್ಟ್……!

    ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಆರೋಗ್ಯ, ಜೀವನಶೈಲಿ

    ಫುಡ್ ಪಾಯಿಸನ್’ಗೆ ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.

  • ಮನರಂಜನೆ

    ಇಲ್ಲಿಂದ ಹೋದ ನಾಲ್ಕೇ ದಿನಕ್ಕೆ ನನ್ನ ಮದ್ವೆ ಮಾಡ್ತಾರೆ ಎಂದ, ಬಿಗ್ ಬಾಸ್ ಮನೆಯ ಭೂಮಿ ಶೆಟ್ಟಿ.

    ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್‍ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್‍ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್‍ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ  ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…