ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ.

ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂಬ ಚಿಂತನೆ ನಡೆದಿದೆ. ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಚೆನ್ನೈನಲ್ಲಿ ವಿಕೋಪ: ಈಗಾಗಲೇ ನೆರೆಯ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗಿ ಸಮಸ್ಯೆಯಾಗಿತ್ತು. ಈಗಲೂ ಅಲ್ಲಿನ ಜನ ನೀರಿಗಾಗಿ ದಿನಗಟ್ಟಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಗ್ರಾಂ. ಬಂಗಾರಕ್ಕಿಂತಲೂ ನೀರಿನ ದರವೇ ಅಧಿಕ ಎಂಬ ಮಾತೂ ಚಾಲ್ತಿಯಲ್ಲಿದೆ. ಹೀಗಾಗಿ ಬೆಂಗಳೂರಿಗೆ ಮುಂದೆ ಇಂಥ ಪರಿಸ್ಥಿತಿ ಬರುವುದು ಬೇಡ ಎಂಬ ಕಾರಣಕ್ಕಾಗಿ ಈ ಕುರಿತು ಸರ್ಕಾರ ಚಿಂತನೆ ನಡೆಸಿದೆ.
ಕೇಪ್‌ಟೌನ್ ಉದಾಹರಣೆ : ದಕ್ಷಿಣ ಆಫ್ರಿಕಾದ ಪ್ರಮುಖ ನಗರಿ ಕೇಪ್‌ಟೌನ್‌ನಲ್ಲಿ 2017ರಲ್ಲಿ ಇಂಥದ್ದೇ ಪರಿಸ್ಥಿತಿ ಉದ್ಭವವಾಗಿತ್ತು. ಇಡೀ ನಗರ ಡ್ರೈ ಸ್ಥಿತಿಗೆ ತಲುಪಿತ್ತು. ಒಂದು ಬಕೆಟ್ ನೀರಿಗೂ ಪಡಬಾರದ ಕಷ್ಟ ಅನುಭವಿಸಿತ್ತು.

ಏಕೆ ಈ ಕ್ರಮ?
ಜೂ.5 ರಂದೇ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡುತ್ತದೆ ಎಂದು ಹೇಳಲಾಗಿತ್ತಾದರೂ, ಇದುವರೆಗೆ ಸರಿಯಾಗಿ ಮಳೆಯೇ ಬಂದಿಲ್ಲ. ಅಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಕೆಆರ್‌ಎಸ್ ಜಲಾನಯ ಪ್ರದೇಶದ ನಾಲ್ಕೂ ಜಲಾಶಯಗಳಿಗೂ ನೀರು ಬಂದಿಲ್ಲ. ಜೂನ್ ಮುಗಿಯುತ್ತಾ ಬಂದಿದ್ದರೂ, ಸರಿಯಾಗದ ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಈಡಾಗಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಕೆಆರ್‌ಎಸ್, ಕಬಿನಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವುದು ಕಷ್ಟವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…