ಸರ್ಕಾರದ ಯೋಜನೆಗಳು

ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

61

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG

ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ ಹಿನ್ನಲೆಯಲ್ಲಿ, ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಉದ್ದೇಶಿಸಿದೆ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಜನವರಿ 2023ರಿಂದ ಜಾರಿಗೆ ಬರುವಂತೆ ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ( Ration Card ) ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಹಾರ ಇಲಾಖೆಯ ಈ ಆದೇಶದ ಹಿನ್ನಲೆಯಲ್ಲಿ, ಈ ತಿಂಗಳಿನಿಂದಲೇ ಪಡಿತರ ಚೀಟಿದಾರರ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಣೆ ಆರಂಭವಾಗಲಿದೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ಸುದ್ದಿ

    ಬೆಂಗಳೂರಿಗೆ ಕಾದಿದೆ ಕಂಟಕ…ಏನದು ?

    ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…

  • ಉಪಯುಕ್ತ ಮಾಹಿತಿ

    ಈ ಮರಕ್ಕೆ ಪೋಲೀಸರ ಭದ್ರತೆ ಇವತ್ತಿಗೂ ನೀಡಲಾಗುತ್ತಿದೆ, ಕಾರಣ ಕೇಳಿದರೆ ಆಶ್ಚರ್ಯ.

    ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ  ನೋಡಲೇಬೇಕು….