ಸುದ್ದಿ

7 ತಲೆಯ ಹಾವಿನ ಪೊರೆ ಪತ್ತೆ..!ನೋಡಿದರೆ ಅದೃಷ್ಟ ಎಂದು ಇಲ್ಲಿನ ಜನ ಮಾಡುತ್ತಿರುವುದೇನು ಗೊತ್ತಾ..?

880

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ.

ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ.

ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ ದೊಡ್ಡಕೆಂಪೇಗೌಡ ಅವರಿಗೆ ಹಾವು ಕಾಣಿಸಿಕೊಂಡಿದ್ದು, 7 ಹೆಡೆಯ ಸರ್ಪ ಹೋಗುತ್ತಿದೆ ನೋಡಬನ್ನಿ ಎಂದು ಕೆಲಸಗಾರರನ್ನು ಅವರು ಕರೆದಿದ್ದಾರೆ.

ಆದರೆ, ಹಾವು ಕಾಣಿಸದ ಕಾರಣ, ಅವರ ಮಾತನ್ನು ಕೇಳಿ ಕೆಲಸಗಾರರು ನಕ್ಕಿದ್ದಾರೆ. ಈಗ 7 ಹೆಡೆ ಸರ್ಪದ ಪೊರೆ ಕಂಡುಬಂದಿರುವುದು ಕುತೂಹಲ ಮೂಡಿಸಿದೆ.

ಸುತ್ತಮುತ್ತಲಿನ ಪ್ರದೇಶದಲ್ಲಿ 7 ಹೆಡೆಯ ಸರ್ಪ ಇರಬಹುದೆಂದು ಜನ ಮಾತಾಡಿಕೊಂಡಿದ್ದು, 7 ಹೆಡೆಯ ಹಾವಿನ ಪೊರೆ ನೋಡಲು ಮುಗಿಬಿದ್ದಿದ್ದಾರೆ. ವಿಷಯ ತಿಳಿದ ಅಕ್ಕ ಪಕ್ಕದ ಗ್ರಾಮಸ್ಥರು ಕೂಡ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    Month End Mobiles Fest: ಫ್ಲಿಪ್‌ಕಾರ್ಟ್ ಆಫರ್ ಸೇಲ್…!

    ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ.  ಅಲ್ಲದೆ ಹೊನೊರ್ ಸರಣಿಯ ಫೋನ್‌ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ.  ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್‌ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ…

  • ಸುದ್ದಿ

    ಬಾಲಿವುಡ್​ಗೆ ಸೈ ಕನ್ನಡಕ್ಕೆ ಜೈ: ಈ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಸಲ್ಮಾನ್ ಖಾನ್‌?

    ‘ಬಿಗ್‌ಬಾಸ್‌’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್‌ಗಾಗಿ ಅನೇಕರು ಬಿಗ್‌ಬಾಸ್‌ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್‌ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್‌ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್‌ಬಾಸ್’ ಪ್ರೆಸ್‌ಮೀಟ್‌ನಲ್ಲಿ ಸಲ್ಮಾನ್‌ ಆಗಮನದ ಬಗ್ಗೆ ಸುದೀಪ್‌ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್‌ಬಾಸ್‌ನ ಬೇರೆ…

  • ಉಪಯುಕ್ತ ಮಾಹಿತಿ, ಸುದ್ದಿ

    ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

    ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…

  • ಕರ್ನಾಟಕ

    ಮೋದಿಯವರಿಗೆ ತನ್ನ ರಕ್ತದಲ್ಲಿ, ಪತ್ರ ಬರೆದ ಕರುನಾಡಿನ ಹಳ್ಳಿ ಯುವಕ! ಆ ಪತ್ರದಲ್ಲಿ ಏನಿದೆ ಗೊತ್ತಾ?

    ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.

  • ಸುದ್ದಿ

    ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ…ಕಾರಣ?

    ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.