ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ.
ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ.
ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ ದೊಡ್ಡಕೆಂಪೇಗೌಡ ಅವರಿಗೆ ಹಾವು ಕಾಣಿಸಿಕೊಂಡಿದ್ದು, 7 ಹೆಡೆಯ ಸರ್ಪ ಹೋಗುತ್ತಿದೆ ನೋಡಬನ್ನಿ ಎಂದು ಕೆಲಸಗಾರರನ್ನು ಅವರು ಕರೆದಿದ್ದಾರೆ.
ಆದರೆ, ಹಾವು ಕಾಣಿಸದ ಕಾರಣ, ಅವರ ಮಾತನ್ನು ಕೇಳಿ ಕೆಲಸಗಾರರು ನಕ್ಕಿದ್ದಾರೆ. ಈಗ 7 ಹೆಡೆ ಸರ್ಪದ ಪೊರೆ ಕಂಡುಬಂದಿರುವುದು ಕುತೂಹಲ ಮೂಡಿಸಿದೆ.
ಸುತ್ತಮುತ್ತಲಿನ ಪ್ರದೇಶದಲ್ಲಿ 7 ಹೆಡೆಯ ಸರ್ಪ ಇರಬಹುದೆಂದು ಜನ ಮಾತಾಡಿಕೊಂಡಿದ್ದು, 7 ಹೆಡೆಯ ಹಾವಿನ ಪೊರೆ ನೋಡಲು ಮುಗಿಬಿದ್ದಿದ್ದಾರೆ. ವಿಷಯ ತಿಳಿದ ಅಕ್ಕ ಪಕ್ಕದ ಗ್ರಾಮಸ್ಥರು ಕೂಡ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್…
ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….