ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

By KOLAR NEWS CHANDRU

June 17, 2023

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.

ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) 98/2022 ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ @ ಚಿನ್ನಿ ಎಂಬಾತನಿಗೆ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.30 ಸಾವಿರ ರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.

ನೊಂದ ಬಾಲಕಿಗೆ ರೂ. 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.