ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ. ಇನ್ನು ಒಂದು ಬಾರಿ ಬಿಜೆಪಿಗೆ ಒಲಿದಿದ್ದರೆ ಮತ್ತೊಂದು ಬಾರಿ ಕಾಂಗ್ರೆಸ್‍ಗೆ ಒಲಿದಿದೆ.
ಇನ್ನು ಯಶವಂತಪುರ ಕ್ಷೇತ್ರದ ರಾಜಕೀಯ ಇತಿಹಾಸ ಕೆದಕಿನೋಡಿದರೆ, ಕ್ಷೇತ್ರ ಪುನರ್‍ವಿಂಗಡಣೆ ನಂತರ 2008ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದರು.
2008 ಮತ್ತು 2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಜವರಾಯಿಗೌಡ ಅವರು ಇದುವರೆಗೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಮೂರನೆ ಅವಧಿಯಲ್ಲೂ ಜವರಾಯಿಗೌಡ ಅವರೇ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.
ಇನ್ನು 2013ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್‍ಗೌಡ ಅವರು 1,20,380 ಮತಗಳನ್ನು ಪಡೆದು ಜೆಡಿಎಸ್‍ನ ಜವರಾಯಿಗೌಡ ಅವರಿಗಿಂತ 29,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಶಾಸಕ ಎಸ್.ಟಿ.ಸೋಮಶೇಖರ್‍ಗೌಡ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.
ಕ್ಷೇತ್ರದ ಜನರ ಪ್ರಕಾರ ಸೋಮಶೇಖರ್ ಅವರು ಶಾಸಕರಾಗಿ ಆಯ್ಕೆಯಾದ ನಂತರ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಾಗಿವೆ. ಹೀಗಾಗಿ ಈ ಬಾರಿಯೂ ಕ್ಷೇತ್ರದ ಮತದಾರರು ಮತ್ತೊಮ್ಮೆ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸದಲ್ಲಿ ಅವರು ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.
ಇನ್ನು ಬಿಜೆಪಿ ಪಕ್ಷದಿಂದ ಯಶವಂತಪುರ ಕ್ಷೇತ್ರವನ್ನು ತಮ್ಮ ಕಪಿಮುಷ್ಟಿಗೆ ಪಡೆಯಲು ಪಕ್ಷ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಕೊಡುವುದು ಪಕ್ಕ ಎಂದು ಹೇಳಲಾಗುತ್ತಿದೆ ಎಂದು ರಾಜಕೀಯ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…
ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…