ಉಪಯುಕ್ತ ಮಾಹಿತಿ

ಬಿಪಿಎಲ್ ಕಾರ್ಡ್ ನಿಮ್ಮಲ್ಲಿ ಇದ್ರೆ, ನಿಮ್ಗೆ ಸಿಗಲಿದೆ ಕಾರ್ ಭಾಗ್ಯ..!ಹೇಗೆಂದು ತಿಳಿಯಲು ಮುಂದೆ ನೋಡಿ…

4709

ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.

ಅದುವೇ ಕಾರ್ ಭಾಗ್ಯ.ಇದೇನಪ್ಪಾ ಇದು ಕಾರ್ ಭಾಗ್ಯ ಅಂತೀರಾ..!

ಹೌದು,ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ 3500 ಮಂದಿಗೆ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮವು ಈ ವಿಶೇಷ ಯೋಜನೆ ರೂಪಿಸಿದೆ. ರಾಜ್ಯ ಸರ್ಕಾರ ಈ ಯೋಜನೆಗಾಗಿ 105 ಕೋಟಿ ರೂ. ಅನುದಾನವನ್ನೂ ಬಿಡುಗಡೆ ಮಾಡಿದೆ. ವಾಲ್ಮೀಕಿ, ಬೋವಿ, ದೇವರಾಜ ಅರಸು ಅಭಿವೃದ್ಧಿ ನಿಗಮಗಳ ಮೂಲಕವೂ ಯೋಜನೆ ಜಾರಿಗೆ ತರಲಾಗುತ್ತಿದೆ. ಯೋಜನೆಗೆ ಬೆಂಗಳೂರಿನಲ್ಲಿ ಈಗಾಗಲೇ ಚಾಲನೆ ದೊರೆತಿದ್ದು ಆರಂಭಿಕವಾಗಿ 1000 ಅಭ್ಯರ್ಥಿಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಯೋಜನೆಯಲ್ಲಿ ಏನೆಲ್ಲಾ ಇದೆ..?

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಸುಮಾರು 3500 ಟ್ಯಾಕ್ಸಿ ಕಾರುಗಳ ವಿತರಣೆ ಮಾಡಲಾಗುತ್ತದೆ.ಆಯ್ಕೆಯಾದ ಫಲಾನುಭವಿಗಳಿಗೆ ಒಂದು ಟ್ಯಾಕ್ಸಿಗೆ 3 ಲಕ್ಷ ರೂ.ವರೆಗೆ ಸಬ್ಸಿಡಿ ನೀಡಲಾಗುತ್ತದೆ.

ಸಾಲ ಸಿಗುವುದು ಮತ್ತೆ ಹಿಂದಿರುಗಿಸುವುದು ಹೇಗೆ..?

ಬ್ಯಾಂಕ್​ಗಳಿಂದ ಸಾಲ ದೊರೆಯುವಂತೆ ಮಾಡುವುದು, ಓಲಾ ಹಾಗೂ ಊಬರ್ ಕಂಪನಿಗಳ ಜತೆ ಟೈಅಪ್ ಮಾಡಿಕೊಂಡು ಬಿಜಿನೆಸ್ ಕೊಡಿಸುವುದು, ಗಳಿಸಿದ ಆದಾಯದಲ್ಲಿ ಬ್ಯಾಂಕ್​ಗಳಿಗೆ ಸಾಲ ಮರುಪಾವತಿಯಾಗುವಂತೆ ನೋಡಿಕೊಳ್ಳುವುದು.

ಕಾರ್  ಭಾಗ್ಯ ಪಡೆಯಲು ಏನೆಲ್ಲಾ ಅರ್ಹತೆ ಇರಬೇಕು..?

  • ನಿರುದ್ಯೋಗಿಯಾಗಿರಬೇಕು.ಯಾವುದೇ ಕೆಲಸದಲ್ಲಿರಬಾರದು.
  • ಅಭ್ಯರ್ಥಿಯು ಹಳದಿ ಬ್ಯಾಡ್ಜ್ ಹೊಂದಿರಬೇಕು.
  • ಕುಟುಂಬದಲ್ಲಿ ಯಾರೊಬ್ಬರು  ಸರ್ಕಾರಿ ಕೆಲಸ ಹೊಂದಿರಬಾರದು.
  • ಬಿಪಿಎಲ್ ಕಾರ್ಡ್ ಹೊಂದಿರಬೇಕು
  • ಒಂದು ವರ್ಷಕ್ಕೆ ಆರ್ಥಿಕವಾಗಿ 12 ಸಾವಿರ ರೂ. ಮೀರಿರಬಾರದು.
  • ಅಭ್ಯರ್ಥಿ ಆಯ್ಕೆ ಹೇಗೆ ನಡೆಯುತ್ತೆ..?
  • ನಿಮ್ಮ ನಿಮ್ಮ ಜಿಲ್ಲೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅರ್ಜಿಗಳನ್ನು ಪಡೆದು ನಿಮ್ಮ ಸ್ವ ವಿವರಗಳನ್ನು ಭರ್ತಿ ಮಾಡಿ ಕೊಡಬೇಕು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರು ಹಾಗೂ ಶಾಸಕರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸಲಾಗುತ್ತದೆ.

ಫಲಾನುಭವಿಯು ಈ  ಕಾರಗಳನ್ನು ಮಾತ್ರ ಕೊಳ್ಳಬಹುದು..

ಫಲಾನುಭವಿಯು 6 ರಿಂದ 8 ಲಕ್ಷ ರೂ. ಬೆಲೆಬಾಳುವ ಕಾರುಗಳನ್ನು ಕೊಳ್ಳಬಹುದು.ಫಲಾನುಭವಿಯು ಹುಂಡೈ ಕಂಪನಿಯ ಎಸ್ಸೆಂಟ್ ಕಾರು, ಟೊಯೋಟಾ ಇಟಿಯೋಸ್, ಮಾರುತಿ ಸ್ವಿಫ್ಟ್ ಡಿಸೈರ್ ಅಥವಾ ಹೊಂಡಾ ಅಮೇಝಾನ್‌ ಕಾರುಗಳನ್ನೇ ಕೊಳ್ಳಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿವೃತ್ತಿ ವಯಸ್ಸಿನ ಗೊಂದಲಗಳಿಗೊಂದು ತೆರೆ : ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ…..!

    ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

  • ಸಿನಿಮಾ

    ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ…! ತಿಳಿಯಲು ನೋಡಿ…

    ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ

  • ಆರೋಗ್ಯ

    ಹಲವು ಸಮಸ್ಯೆಗಳಿಗೆ ರಾಮಭಾಣ ಖರಬೂಜ ಹಣ್ಣು. ಈ ಹಣ್ಣಿನ

    ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…

  • ಸುದ್ದಿ

    ಡಿಜಿಟಲ್‌ ವ್ಯಾಲೆಟ್‌ ಕಂಪನಿಯ ಫೋನ್‌ಪೇ ಕೆವೈಸಿ ಸೇವೆಯು ಈಗ ಗ್ರಾಹಕರ ಮನೆ ಬಾಗಿಲಿಗೆ ಹೊರಟಿದೆ,..ಕಾರಣ ತಿಳಿಯಲು ಇದನ್ನೊಮ್ಮೆ ಓದಿ..?

    ಡಿಜಿಟಲ್‌ ವ್ಯಾಲೆಟ್‌ಗಳಿಗೆ ಕೆವೈಸಿ ಅಳವಡಿಸಲು ಆರ್‌ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್‌ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್‌ ವ್ಯಾಲೆಟ್‌ ಕಂಪನಿ ಫೋನ್‌ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್‌ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್‌ಬಿಐ ಆಗಸ್ಟ್‌ವರೆಗೆ ವಿಸ್ತರಿಸಿತ್ತು,…

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…