ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

ಬೇಸಿಗೆಯ ಬಿಸಿಲಿನ ಝಳದಿಂದ ತತ್ತರಿಸಿ ಹೋದವರ ಶರೀರಕ್ಕೆ ತಂಪು ನೀಡಿ ದೇಹದ ಸಮತೋಲನವನ್ನು ಕಾಪಾಡುತ್ತದೆ.ಯಾರೇ ಕುಡಿದರೂ ಯಾವುದೇ ಅಡ್ಡಪರಿಣಾಮಗಳಿಲ್ಲ. ದ್ವಿತೀಯ ಮಹಾಯುದ್ಧದ ಸಮಯದಲ್ಲಿ ಪೆಸಿಫಿಕ್ ಸಾಗರ ಪ್ರದೇಶಗಳಲ್ಲಿ, ಗಾಯಗೊಂಡ ಯೋಧರಿಗೆ ತುರ್ತು ಪ್ಲಾಸ್ಮಾ ನೀಡಿಕೆಗಾಗಿ ನೇರವಾಗಿ ಎಳನೀರನ್ನು ಸೇರಿಸುತ್ತಿದ್ದರೆಂಬುದು ಆಶ್ಚರ್ಯಕರವಾದರೂ ಸತ್ಯವಾಗಿದೆ.

ಆದ್ದರಿಂದ ಶಿಶುಗಳಲ್ಲಿ ಪಚನಕ್ರಿಯೆಗೆ ಯಾ ಕರುಳಿನ ಸಮಸ್ಯೆಗೆ ತುಂಬಾ ಪರಿಣಾಮಕಾರಿಯಾಗಿದೆ. ಎಳನೀರು ದಿಢೀರ್ ಚೇತೋಹಾರಿ ಮತ್ತು ಅತ್ಯಂತ ಶಕ್ತಿದಾಯಕವಾದ್ದರಿಂದ ಅಶಕ್ತರಿಗೆ ಹೊಸ ಚೈತನ್ಯವನ್ನು ತುಂಬುತ್ತದೆ ಮತ್ತು ಹಣ್ಣಿನ ರಸಗಳಿಗಿಂತಲೂ ಹೆಚ್ಚು ಆರೋಗ್ಯಕರವಾಗಿದೆ.ದಿನಪೂರ್ತಿ ಲವಲವಿಕೆಯಿಂದ ಕಾರ್ಯಮಗ್ನವಾಗಿರಲು ಉಪಯುಕ್ತ.ಸಂಪೂರ್ಣವಾಗಿ ಔಷಧೀಯ ಗುಣಧರ್ಮಗಳನ್ನು ಒಳಗೊಂಡಿರುವುದರಿಂದ ಎಳನೀರನ್ನು ನಿಯಮಿತವಾಗಿ ಬಳಸಬಹುದು.

ದೂರಪ್ರಯಾಣಿಸುವಾಗ ಎಳನೀರು ಕೆಡುವ ಭಯವಿಲ್ಲ, ಆದರೂ ಗೊಂಚಲಿನಿಂದ ಬೇರ್ಪಡಿಸಿದ 24 ರಿಂದ 48 ಗಂಟೆಗಳವರೆಗೆ ಮಾತ್ರ
ಅದರ ತಾಜಾತನವಿರುತ್ತದೆ. ನಂತರ ಫ್ರಿಜ್‌ನಲ್ಲಿ ಇರಿಸಿದರೂ ತಾಜಾತನ ನಾಶವಾಗುತ್ತದೆ. ಎಳನೀರು ಆಹ್ಲಾದಕರ ಪಾನೀಯ ಮತ್ತು ಒಂದು ಬಾಳೆ ಹಣ್ಣಿನಲ್ಲಿರುವುದಕ್ಕಿಂತ ಹೆಚ್ಚಿನ ಪ್ರಮಾಣದ ಪೊಟಾಷಿಯಂ ಒಳಗೊಂಡಿದೆ. ಎಳನೀರು ಕರುಳಿನ ಕಾರ್ಯವನ್ನು ಮತ್ತು ಪಚನಶಕ್ತಿಯನ್ನು
ಹೆಚ್ಚಿಸುತ್ತದೆ.

ಹೊಟ್ಟೆಯಲ್ಲಿರುವ ಕ್ರಿಮಿಗಳನ್ನು ನಾಶಮಾಡುತ್ತದೆ.ಎಳನೀರಿನಲ್ಲಿರುವ ಸಲೈನ್ ಮತ್ತು ಅಲ್ಬುಮಿನ್ ಕಾಲರಾ ರೋಗಕ್ಕೆ ಅತ್ಯುಪಯುಕ್ತ ಔಷಧಿ.ಖನಿಜ ವಿಷವನ್ನು ದೇಹದಿಂದ ಹೊರದಬ್ಬುತ್ತದೆ. ಎಳನೀರಿನ ಔಷಧೀಯ ಗುಣಗಳು-ಮೂತ್ರಮಲ ಮತ್ತು ಮೂತ್ರದಸೋಂಕನ್ನು ತಡೆಗಟ್ಟುವ ಗುಣ ಹೊಂದಿರುವ ಕಾರಣ ಕಿಡ್ನಿಕಲ್ಲುಗಳ ಸಂಭವವನ್ನು ಕಡಿಮೆ ಮಾಡುತ್ತದೆ. ಆಹ್ಲಾದ, ಶಕ್ತಿನೀಡವ ಪಾನೀಯಗಳಿಗಿಂತ ಕಡಿಮೆ ಸೋಡಿಯಂ ಹೊಂದಿದೆ. ಹೃದಯಕ್ಕೆ ಸಂಬಂಧಿಸಿದ ತೊಂದರೆಗಳು ಮತ್ತು ದೇಹದ ಜಲಾಂಶ ನಷ್ಟವಾಗುವಿಕೆಯನ್ನು ಕಡಿಮೆ ಮಾಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್‌ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…