ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.
‘ಕಳೆದ ಮೂರು ವರ್ಷಗಳ ಅಂತರದಲ್ಲಿ 30ಕ್ಕೂ ಹೆಚ್ಚು ಬಾರಿ ನನಗೆ ಹಾವು ಕಚ್ಚಿದೆ. ನಾನು ಹಾವು ಕಂಡ ತಕ್ಷಣ ಅದರ ಜತೆ ಆಟವಾಡಲು ಆರಂಭಿಸುತ್ತೇನೆ. ತಕ್ಷಣ ಹಾವು ನನಗೆ ಕಚ್ಚುತ್ತದೆ. ನಾನು ಶಾಲಾ ದಿನಗಳಲ್ಲಿ ಓದುತ್ತಿದ್ದಾಗ ಹಲವು ಹಾವುಗಳು ನನಗೆ ಕಚ್ಚಿವೆ. ಒಮ್ಮೊಮ್ಮೆ ದಿನಕ್ಕೆ ಎರಡು ಮೂರು ಬಾರಿ ಹಾವುಗಳೂ ಕಚ್ಚಿದ್ದಿದೆ.
ಜ್ಯೋತಿಷಿಗಳು ನನಗೆ ದೇವರ ಜತೆ ಸಂಬಂಧ ಇದೆ ಎನ್ನುತ್ತಾರೆ,’ ಎಂದು ಹೇಳುತ್ತಾಳೆ ಯುವತಿ. ವಿವಿಧ ಆಸ್ಪತ್ರೆಗಳಲ್ಲಿರುವ ದಾಖಲೆಗಳ ಪ್ರಕಾರ ಇದೇ ಫೆಬ್ರವರಿ 18ಕ್ಕೆ ಆಕೆ 34ನೇ ಬಾರಿ ಹಾವಿನಿಂದ ಕಚ್ಚಿಸಿಕೊಂಡಿದ್ದಾಳೆ. ಆದರೆ ಇದಕ್ಕೆ ವೈದ್ಯರು ಹೇಳುವುದೇ ಬೇರೆ. ಹಲವು ಬಾರಿ ವಿಷವಿಲ್ಲದ ಹಾವುಗಳು ಆಕೆಗೆ ಕಚ್ಚಿವೆ.
ಕೆಲವೊಮ್ಮೆ ವಿಷ ಕಡಿಮೆ ಇರುವ ಹಾವುಗಳು ಕಚ್ಚಿದ್ದರಿಂದ ಇವಳಿಗೆ ಏನೂ ಆಗಿಲ್ಲ ಎನ್ನುತ್ತಾರೆ. ಒಟ್ಟಾರೆ ಯುವತಿ ಮಾತ್ರ ಇನ್ನೂ ಬದುಕಿದ್ದಾಳೆ.
ವೈದ್ಯಕೀಯ ದಾಖಲೆಗಳ ಪ್ರಕಾರ ಆಕೆಗೆ 34 ಬಾರಿ ಹಾವು ಕಚ್ಚಿದ್ದಂತೂ ನೂರಕ್ಕೆ ನೂರು ಸತ್ಯ. ಇನ್ನು ಕೆಲವರು ನಿರಂತರವಾಗಿ ಹಾವು ಕಚ್ಚುತ್ತಿರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಉತ್ಪತ್ತಿಯಾಗಿ ಮುಂದಿನ ಬಾರಿ ಕಚ್ಚಿದಾಗ ಏನೂ ಆಗದಂತೆ ತಡೆಯುತ್ತದೆ. ಇದರಿಂದ ಆಕೆಗೆ ಏನೂ ಆಗುತ್ತಿಲ್ಲ ಎನ್ನುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…
ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…