ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..
ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…
ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.
ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.
*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.
*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.
*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.
ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…