ಸ್ಪೂರ್ತಿ

ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

360

ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು.

4 ಲಕ್ಷ ರೂಗಳ ದಾನ…

ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20 ಕಿ.ಮೀ ದೂರದಲ್ಲಿರುವ, ಝಾನ್ಸ ಜಿಲ್ಲೆಯ ರಾಮೇಶ್ವರ ಗ್ರಾಮದವರು ಇವರು ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದಾರೆ.  ಪ್ರಾವಿಡೆಂಟ್ ಫಂಡ್ ಆಗಿ ಸ್ವೀಕರಿಸಿದ ನಾಲ್ಕು ಲಕ್ಷ ರೂ ಗಳನ್ನು ತಮ್ಮ ಗ್ರಾಮದಲ್ಲಿ 1 ಕಿಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಸಂಪೂರ್ಣ ಮೊತ್ತವನ್ನು ದಾನ ಮಾಡಿದ್ದಾರೆ.

ಮೌರ್ಯ ಅವರಿಗೆ ಈ ಹಣವನ್ನು ದಾನ ಮಾಡಬೇಕು ಅನಿಸಿದ್ದು ಯಾಕೆ..?

ತನ್ನ ಮನೆ ಮುಂದಿನ ರಸ್ತೆಯು ತುಂಬಾನೇ ಕೆಟ್ಟಿದ್ದು ದ್ವಿಚಕ್ರಗಳು ಕೂಡ ಓಡಾಡಲು ಆಗದಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಬೇಸತ್ತ ಜನರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದರು. ಇದರ ಬಗ್ಗೆ ತಲೆ ಕೆಡಿಸಿ ಕೊಳ್ಳದ ಸರ್ಕಾರ. ಅಂತಹ ಸಮಯದಲ್ಲಿ ಆ ರಸ್ತೆಯಲ್ಲಿ ಬೈಸಿಕಲ್ ಸವಾರಿ ಮಾಡುವ ಸವಾಲಾಗಿತ್ತು.

ಆಗಾಗಿ ಮೌರ್ಯ ಅವ್ರು ತಮ್ಮ ಪ್ರಾವಿಡೆಂಟ್ ಫಂಡ್ ನ 4 ಲಕ್ಷ ಮೊತ್ತವನ್ನು ತನ್ನ ಹಳ್ಳಿಯ ರಸ್ತೆಯ ನಿರ್ಮಾಣಕ್ಕೆ ಕೊಟ್ಟಿದ್ದಾರೆ.ಈಗ ಆ ರಸ್ತೆಯಲ್ಲಿ ಬರಿ ದ್ವಿಚಕ್ರ ಮಾತ್ರ ಅಲ್ಲ ಎಲ್ಲ ರೀತಿಯ ವಾಹನಗಳು ಓಡಾಡುತ್ತಿವೆ. ಇದರಿಂದ ತನ್ನ ಗ್ರಾಮಕ್ಕೆ ಅತ್ಯಮೂಲ್ಯವಾದ ಕೆಲಸವನ್ನು ಮಾಡಿದ್ದೇನೆ ಎಂಬುದಾಗಿ ಹೇಳುತ್ತಾರೆ. ಈ ರಸ್ತೆಯನ್ನು ನಿರ್ಮಿಸಲು ಸತತ ಏಳು ತಿಂಗಳು ತೆಗೆದುಕೊಂಡಿದ್ದರು ಉತ್ತಮ ಗುಣ ಮಟ್ಟದ ರಸ್ತೆಯ ನಿರ್ಮಾಣವಾಗಿದೆ.

ಇವರ ಈ ಸಾಮಾಜಿಕ ಕಾರ್ಯಕ್ಕೆ ಪ್ರಶಸ್ತಿ ಲಭಿಸಿದೆ.

ಮೌರ್ಯ ಅವರನ್ನು ಎಪಿಜೆ ಅಬ್ದುಲ್ ಕಲಾಂ ಮತ್ತು ಪ್ರಣಬ್ ಮುಖರ್ಜಿ ಅವರಿಂದ ಪ್ರಶಂಸನೀಯ ಸೇವೆಗಾಗಿ ಎರಡು ಬಾರಿ ರಾಷ್ಟ್ರಪತಿ ಪದಕ ನೀಡಲಾಗಿದೆ. ಇವರಲ್ಲದೆ ಅವರು ಹಲವಾರು ಪ್ರಶಸ್ತಿಗಳನ್ನು ಕೂಡಾ ಪಡೆದಿದ್ದಾರೆ.

ಅದೇನೇ ಇರಲಿ ಇಂತಹ ಕೆಲಸವನ್ನು ಸರ್ಕಾರಗಳು ಮಾಡಬೇಕು ಅಲ್ಲವೇ? ಆದರೆ ಇವರು ತಮ್ಮ ಜೀವನಕ್ಕೆ ಬಳಸಿಕೊಳ್ಳ ಬೇಕಾದ ಹಣವನ್ನು ಸಾಮಾಜಿಕ ಕಾರ್ಯಕ್ಕೆ ಬಳಸಿರೋದು ಹೆಮ್ಮೆಯ ವಿಚಾರವೇ. ಹಾಗು ಇವರ ಈ ಒಂದು ಉತ್ತಮ ಕೆಲಸದಿಂದ ಅದೆಷ್ಟೋ ಜನಕ್ಕೆ ಸ್ಪೂರ್ತಿದಾಯಕವಾಗಿದೆ ಅನ್ನಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್…!

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…

  • ದೇಶ-ವಿದೇಶ

    ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.

  • ಸಿನಿಮಾ

    ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

    ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…