karnataka

ನಾಳೆ ಕರ್ನಾಟಕ ಬಂದ್!!! ಆಗುತ್ತಾ ಇಲ್ವ, ಮುಂದೆ ಓದಿ…

519

ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ ಆಗ್ರಹಿಸಿ  ಅನೇಕ ಬೇಡಿಕೆಗಳನ್ನ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಸೋಮವಾರ ನಡೆಯುವ ಬಂದ್ ಗೆ ಬೆಂಬಲ ನೀಡುವಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

ಆದರೆ, ಬಂದ್ ಗೆ ಕೆಲ ಸಂಘಟನೆಗಳ ವಿರೋಧವಿದೆ. ಹೀಗಾಗಿ ನಾಳೆ ಬಂದ್ ಇದೆಯೋ ಇಲ್ಲವೋ ಎಂಬ ಗೊಂದಲ ಹುಟ್ಟಿಕೊಂಡಿದೆ. ಹಾಗಾಗಿ ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್​​​ ಗೊಂದಲ್ಲಿದೆ. ಯಾಕೆಂದರೆ ಬಂದ್​​’ಗೆ ಬೆಂಬಲ ನೀಡಲು ಹಲವು ಸಂಘಟನೆಗಳು ನಿರಾಕರಿಸಿವೆ.

ಕನ್ನಡ ಒಕ್ಕೂಟದ ಪರವಾಗಿ ವಾಟಾಳ್ ನಾಗರಾಜ್, ರಾಜ್ಯ ಬಂದ್’ಗೆ ಕರೆ ನೀಡಿದ್ದಾರೆ. ಆದರೆ, ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ಕೆಎಸ್ ಆರ್ ಟಿಸಿ, ಬಿಎಂಟಿಸಿ, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳೇ ಬೆಂಬಲ ನೀಡಲು ನಿರಾಕರಿಸಿವೆ. ಆಟೋ ಚಾಲಕರ ಸಂಘದಿಂದಲೂ ಬೆಂಬಲ ಇಲ್ಲ ಎಂದು ಹೇಳಲಾಗಿದೆ. ಹಾಗಾಗಿ ಜೂನ್ 12ರ ಬಂದ್ ಗೆ ವಾಟಾಳ್ ನಾಗರಾಜ್ ಅವರು ಎಲ್ಲಾ ಸಂಘಟನೆಗಳ ಮನವೊಲಿಸಿ ಬೆಂಬಲ ಪಡೆದುಕೊಳ್ಳುತ್ತಾರೋ ಅಥವಾ ಬಂದ್ ಗೆ ನೀರಸ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಜೂನ್ 12ರಂದು ರಾಜ್ಯ ಬಂದ್ ಇದೆಯೋ ಇಲ್ಲವೋ ಎಂಬ ಬಗ್ಗೆ ಇವತ್ತು ಅಂತಿಮ ನಿರ್ಧಾರ ಹೊರಬೀಳಬಹುದು. ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ, ಕಳಸಾ ಬಂಡೂರಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡ ಪರ ಒಕ್ಕೂಟ ಬಂದ್‌ಗೆ ಕರೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಆದರೆ, ಚಾಲಕರು ಮತ್ತು ನಿರ್ವಾಹಕರು  ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದು, ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗುವುದಿಲ್ಲ ಎಂದೂ ಸಂಘ ಎಂದು ಸ್ಪಷ್ಟಪಡಿಸಿದೆ.

ಕರ್ನಾಟಕ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ, ಆಟೋರಿಕ್ಷಾ ಮಾಲೀಕರು ಮತ್ತು ಚಾಲಕರ ಸಂಘ, ಬೆಂಗಳೂರು ನಗರ ಹೋಟೆಲ್‌ ಮಾಲೀಕರ ಸಂಘ, ಎಪಿಎಂಸಿ ವರ್ತಕರ ಸಂಘ, ರಾಜ್ಯ ತೈಲ ವರ್ತಕರ ಸಂಘಗಳು ತಮ್ಮ ಬೆಂಬಲ ಇಲ್ಲ ಎಂದು ತಿಳಿಸಿವೆ.  ಬಸ್‌ಗಳು ಮತ್ತು ಆಟೋರಿಕ್ಷಾಗಳ ಎಂದಿನಂತೆ ಸಂಚರಿಸುತ್ತವೆ. ಪೆಟ್ರೋಲ್ ಬಂಕ್‌ಗಳು, ಶಾಲಾ ಕಾಲೇಜುಗಳು, ಹೋಟೆಲ್‌ಗಳು, ಅಂಗಡಿಗಳು ಸಹ ಕಾರ್ಯನಿರ್ವಹಿಸುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ ಪಹಣಿ (ಆರ್.ಟಿ.ಸಿ.) ಪತ್ರದ ಮಾಹಿತಿಯನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…

  • ಸುದ್ದಿ

    ವಿಟಮಿನ್ ‘ಡಿ’ ಮಹಿಳೆಯರಿಗೆ ಯಾಕೆ ಮುಖ್ಯ ಗೊತ್ತ…?

    ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…