ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲೇ ಅತ್ಯಂತ ದೊಡ್ಡ ಮೆಟ್ರೋ ನಿಲ್ದಾಣ, ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿರುವ, ಮೆಜೆಸ್ಟಿಕ್ನ ‘ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಲು ಸಜ್ಜಾಗಿದೆ.
ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿದ್ದು, ಪ್ರಯಾಣಿಕರಿಗೆ ಆಸನ ವ್ಯವಸ್ಥೆ, ಮಾರ್ಗಸೂಚಿ ಫಲಕಗಳನ್ನು ಅಳವಡಿಸುವ ಸಣ್ಣಪುಟ್ಟ ಕೆಲಸಗಳು ಮಾತ್ರ ಬಾಕಿ ಇದ್ದು ಸ್ವಲ್ಪ ದಿನಗಳಲ್ಲೇ ಪೂರ್ಣಗೊಳ್ಳಲಿದೆ.
ಈ ನಿಲ್ದಾಣಕ್ಕೆ ಬರುವ ರೈಲುಗಳು ನಗರದ ನಾಲ್ಕೂ ದಿಕ್ಕಿನಿಂದ ಪ್ರಯಾಣಿಕರನ್ನು ಹೊತ್ತು ತರಲಿವೆ. ಉತ್ತರ–ದಕ್ಷಿಣ ಕಾರಿಡಾರ್ (ಯಲಚೇನಹಳ್ಳಿ– ನಾಗಸಂದ್ರ ಮಾರ್ಗ) ಹಾಗೂ ಪೂರ್ವ ಪಶ್ಚಿಮ ಕಾರಿಡಾರ್ (ಬೈಯಪ್ಪನಹಳ್ಳಿ– ಮೈಸೂರು ರಸ್ತೆ ಮಾರ್ಗ) ಪ್ರಯಾಣಿಕರು ಮಾರ್ಗ ಬದಲಾಯಿಸಲು ಈ ನಿಲ್ದಾಣವನ್ನು ಬಳಸಬಹುದು.
ಪ್ರಸ್ತುತ ಈ ನಿಲ್ದಾಣ ದಿನವೊಂದಕ್ಕೆ ಸರಾಸರಿ 39,000 ಪ್ರಯಾಣಿಕರನ್ನು ನಿರ್ವಹಣೆ ಮಾಡುತ್ತಿದೆ. ‘ನಮ್ಮ ಮೆಟ್ರೊ’ ಯೋಜನೆಯ ಮೊದಲ ಹಂತದ ಎಲ್ಲಾ ಮಾರ್ಗಗಳಲ್ಲೂ ಪೂರ್ಣ ಪ್ರಮಾಣದಲ್ಲಿ ರೈಲು ಸಂಚಾರ ಆರಂಭವಾದ ಬಳಿಕ ಇಲ್ಲಿ ಪ್ರಯಾಣಿಕರ ದಟ್ಟಣೆ ಮೂರು ಪಟ್ಟು ಹೆಚ್ಚಾಗಲಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೆಜೆಸ್ಟಿಕ್ನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಕೇಂದ್ರ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುತ್ತದೆ. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವೂ (ನಗರ ರೈಲು ನಿಲ್ದಾಣ) ಇಲ್ಲಿಂದ ಕೆಲವೇ ಮೀಟರ್ಗಳಷ್ಟು ದೂರದಲ್ಲಿದೆ. ಈ ನಿಲ್ದಾಣವನ್ನು ಬಳಸುವವರ ಪೈಕಿ ರಾಜಧಾನಿಯಿಂದ ಬೇರೆ ಊರುಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚು.
ಮೆಜೆಸ್ಟಿಕ್ನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ನಿಲ್ದಾಣವೂ ಮೆಟ್ರೊ ನಿಲ್ದಾಣದ ಪಕ್ಕದಲ್ಲೇ ಇದೆ. ಬಿಎಂಟಿಸಿ ಬಸ್ ಬಳಸಿ ನಗರದ ಬೇರೆ ಬೇರೆ ಪ್ರದೇಶಗಳಿಗೆ ತಲುಪುವವರೂ ಈ ನಿಲ್ದಾಣವನ್ನು ಬಳಸುತ್ತಾರೆ. ಹಾಗಾಗಿ ಉಳಿದ ಮೆಟ್ರೊ ನಿಲ್ದಾಣಗಳಿಗಿಂತ ಇಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚು ಇರುತ್ತದೆ.
ಈ ನಿಲ್ದಾಣ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆಗೆ ಸಿದ್ಧವಾಗಿದೆ. ಈ ದಿನಗಳಿಗಾಗಿ ನಾವು ಕಾತರದಿಂದ ಕಾಯುತ್ತಿದ್ದೆವು. ನಗರಕ್ಕೆ ಪ್ರಮುಖ ಮೂಲಸೌಕರ್ಯವನ್ನು ನಿರ್ಮಿಸುವಲ್ಲಿ ಕಾರ್ಯನಿರ್ವಹಿಸಿದ ಹೆಮ್ಮೆ ನಮ್ಮದು’ ಎಂದು ಅಧಿಕಾರಿಗಳು ತಮ್ಮ ಖುಷಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….
ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…