ರಾಜಕೀಯ

ಈ ಸಮೀಕ್ಷೆಯ ಪ್ರಖಾರ ದೇಶದ ಅತ್ಯಂತ ಜನಪ್ರಿಯ ವ್ಯಕ್ತಿ ಮತ್ತು ರಾಜಕಾರಣಿ ಯಾರು ಗೊತ್ತಾ..?

404

ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ.

ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ.

 

ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು ಸಮರ್ಥ ರಾಜಕಾರಣಿ ಎಂದು ಶೇಕಡ 48 ಮಂದಿ ಹೇಳಿದ್ದಾರೆ.

ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುಲು ಮತ್ತು ದೂರದರ್ಶಿತ್ವ ಹೊಂದಿರುವ ನಾಯಕರಾಗಿ ನರೇಂದ್ರ ಮೋದಿ ಉತ್ತಮ ಆಯ್ಕೆ ಎಂದು ಸಮೀಕ್ಷೆಯಲ್ಲಿ ಪಾಲ್ಗೋಂಡ ಜನರು ಹೇಳಿದ್ದಾರೆ.

ಪ್ರಧಾನಿ ಮೋದಿ ನಂತರದ ಸ್ಥಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಥಾನ ಪಡೆದಿದ್ದಾರೆ. ರಾಹುಲ್ ಗಾಂಧಿ ಪರವಾಗಿ ಶೇ. 11 ಮಂದಿ ಮತ ನೀಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ 9.3 ಮತ. ಅಖಿಲೇಶ್ ಯಾದವ್ 7 ಮತ, ಮಮತಾ ಬ್ಯಾನರ್ಜಿ 4.2 ಮತ, ಮಾಯಾವತಿ 3.1 ಮತ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ರಾಜಕೀಯ

    ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

    ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ದೇಶ-ವಿದೇಶ

    ಭಾರತ ಚೀನಾ ನಡುವೆ ಯುದ್ದ ನಡೆದ್ರೆ,ಯಾವ ದೇಶಗಳು ಭಾರತಕ್ಕೆ ಸಹಾಯ ಮಾಡುತ್ತವೆ ಗೊತ್ತಾ???

    ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.