ಸಿನಿಮಾ

ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

621

ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ.
ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವಾದವಿದೆ.ಮತ್ತೊಂದೆಡೆ ಹನುಮನ ಭಕ್ತನಾಗಿರುವ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸುತ್ತಿದ್ದಾರೆ. ತಮಿಳುನಾಡಿನ ಹಲವೆಡೆ ಗೋಶಾಲೆ ದತ್ತು ಪಡೆದಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮಕ್ಕಳು ಗೋವನ್ನು ಗಿಫ್ಟಾಗಿ ಕೊಟ್ಟಿದ್ದರು.

ಎಡಪಂಥಿಯರು ಶ್ರುತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎಂಬುದಕ್ಕೆ ಪ್ರಕಾಶ್ ರೈ, ಚೇತನ್, ಕವಿತಾ ಲಂಕೇಶ್ ಎಲ್ಲರೂ ಅವರ ಜೋತೆಗಿರುವುದೇ ಕಾರಣ. ಏಕೆಂದರೆ ಇವರೆಲ್ಲರೂ ಮೋದಿ ವಿರುದ್ದವೇ ಮಾತನಾಡುತ್ತಾರೆ ಎಂಬುದೇ ಇದಕ್ಕೆ ಕಾರಣ.
ಹಾಗಾಗಿ ಇವರೆಲ್ಲರು ಸೇರಿಕೊಂಡು ನಟ ಅರ್ಜುನ್ ಸರ್ಜಾ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ತೇಜಸ್ವಿನಿ ರಮೇಶ್ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಪೊಲೀಸರು ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಪೊಲೀಸರು ೫೦ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಈಗಾಗಲೇ ವಿಸ್ಮಯ ಸಿನಿಮಾದ ಸಹ ನಿರ್ದೇಶಕಿ ಮೋನಿಕಾ, ನಿರ್ದೇಶಕ ಮತ್ತು ಶ್ರುತಿ ಆಪ್ತ ಸಹಾಯಕ ಕಿರಣ್ ಇದರ ಬಗ್ಗೆ ಪೊಲೀಸರಲ್ಲಿ ಹೇಳಿಕೆ ಕೊಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

    ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…

  • ರಾಜಕೀಯ, ಸಿನಿಮಾ

    ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

    ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…

  • ಆರೋಗ್ಯ

    ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

    ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

  • ಆರೋಗ್ಯ

    ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

    ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…