ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ.
ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು.

ಬಹುಶಃ ದರ್ಶನ್ ಅವರು ಭಯ ಪಡುವ ಏಕೈಕ ವ್ಯಕ್ತಿ ಎಂದರೆ ಅದು ಅಂಬರೀಶ್ ಅವರೇ ಎನ್ನಬಹುದು.. ಅಷ್ಟು ಪ್ರೀತಿ.. ಅಷ್ಟು ಗೌರವ.. ಆ ಸಂಬಂಧವನ್ನು ಹೇಳಲು ಅಸಾಧ್ಯ..ಸುಮಲತಾ ಅವರೂ ಅಷ್ಟೇ ಅಭಿಶೇಕ್ ಹಾಗೂ ದರ್ಶನ್ ಅವರನ್ನು ಒಂದೇ ರೀತಿಯಾಗಿ ನೋಡುತ್ತಿದ್ದರು.. ಅಷ್ಟು ಆತ್ಮೀಯತೆ ಪ್ರೀತಿ ಇತ್ತು..ಅದೇ ರೀತಿಯಾಗಿ ದರ್ಶನ್ ಅವರೂ ಕೂಡ ಸುಮಲತಾ ಅವರನ್ನು ಮದರ್ ಇಂಡಿಯಾ ಎನ್ನು ತ್ತಿದ್ದರು..

ಅಂಬರೀಶ್ ಅವರು ಶನಿವಾರ ರಾತ್ರಿ ಇಹಲೋಕ ತ್ಯಜಿಸಿದಾಗ ದರ್ಶನ್ ಅವರು ಯಜಮಾನ ಸಿನಿಮಾದ ಶೂಟಿಂಗ್ ನಿಮಿತ್ತ ಸ್ವೀಡನ್ ನಲ್ಲಿದ್ದರು.. ವಿಷಯ ತಿಳಿಯುತ್ತಿದ್ದಂತೆ ಅರಗಿಸಿಕೊಳ್ಳಲಾಗದೆ ಎಲ್ಲವನ್ನು ರದ್ದುಗೊಳಿಸಿ ಬೆಂಗಳೂರಿಗೆ ಬರಲು ತಯಾರಾದರು.. ಆದರೆ ದರ್ಶನ್ ಅವರಿಗೆ ಅಲ್ಲಿಯೂ ಕೂಡ ದುರ್ವಿಧಿ ಟಿಕೇಟ್ ಸಿಗದೆ ಪರದಾಡಿ ನಂತರ ಹೇಗೋ ಕಷ್ಟಪಟ್ಟು ಟಿಕೇಟ್ ಪಡೆದು ಇಂದು ಬೆಳಿಗ್ಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ..
ತಮ್ಮ ಅಪ್ಪಾಜಿಯ ಅಂತ್ಯ ಸಂಸ್ಕಾರಕ್ಕೆ ತಡವಾಗಿ ಬರಲು ಕಾರಣ ಏನು ಗೊತ್ತಾ?

ಭಾರತ ಹಾಗೂ ಸ್ವೀಡನ್ ದೇಶಕ್ಕೆ ನೇರವಾದ ವಿಮಾನವಿಲ್ಲ. ದುಬೈ ಮೂಲಕ ಭಾರತಕ್ಕೆ ಪ್ರಯಾಣ ಮಾಡಬೇಕು. ಸ್ವೀಡನ್‍ನಿಂದ ಭಾರತಕ್ಕೆ ಅಂದಾಜು 7 ಸಾವಿರ ಕಿ.ಮೀ ದೂರವಿದೆ. ಹೀಗಾಗಿ ದರ್ಶನ್ ಸ್ವೀಡನ್‍ನಿಂದ ದುಬೈಗೆ ಬಂದು, ದುಬೈನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿ ಬಂದಿದ್ದಾರೆ.
ಸ್ವೀಡನ್‍ನಿಂದ ದುಬೈ, ಟರ್ಕಿ, ಇರಾಕ್, ರೋಮೆನಿಯಾ, ಪೋಲೆಂಡ್ ಸೇರಿದಂತೆ ಹಲವು ದೇಶಗಳನ್ನು ದಾಟಿ ಭಾರತಕ್ಕೆ ಬರಬೇಕು.

ಮೊದಲೇ ಟಿಕೆಟ್ ಬುಕ್ ಮಾಡಿದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಶನಿವಾರ ರಾತ್ರಿಯೇ ತುರ್ತಾಗಿ ಭಾನುವಾರ ವಿಮಾನ ಟಿಕೆಟ್ ಬೇಕಾದರೆ ಅಷ್ಟು ಸುಲಭವಾಗಿ ಸಿಗುವುದಿಲ್ಲ. ನಮಗೆ ಬೇಕಾದ ಸಮಯಕ್ಕೆ ಸಿಗುವುದು ಬಹಳ ಕಷ್ಟ. ಈ ಎಲ್ಲ ಕಷ್ಟಗಳನ್ನು ನಿವಾರಿಸಿ ದರ್ಶನ್ ಸೋಮವಾರ ಅಂದರೆ ಇಂದು ಬೆಳಗ್ಗೆ ಬೆಂಗಳೂರು ತಲುಪಿ ತಮ್ಮ ಪ್ರೀತಿಯ ಅಪ್ಪಾಜಿಯ ದರ್ಶನ ಮಾಡಿದ್ದರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.