ಸಿನಿಮಾ

ರೆಬೆಲ್ ಸ್ಟಾರ್ ಅಂಬಿ ಅಂತ್ಯಕ್ರಿಯೆಗೆ, ರಮ್ಯ ಬಾರದೆ ಇರಲು ಕಾರಣವೇ ಇದು!

409

ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು.

ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ ಮಾತ್ರ ಕಾಣಿಸಿಕೊಂಡಿರಲಿಲ್ಲ.
ರಮ್ಯ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದಿರಲು ಕಾರಣ?

ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ(Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆಸ್ಟಿಯೋಕ್ಲ್ಯಾಟೋಮಾ ಎನ್ನುವುದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ. ರಮ್ಯಾ ಅವರ ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆ ಇದಾಗಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದ್ರು ಮಾರಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ರಂತೆ. ಹೀಗಾಗಿ ಅವರು ಚಿಕಿತ್ಸೆ ಪಡೆದು ಅಕ್ಟೊಬರ್ ನಿಂದ ವಿಶ್ರಾಂತಿ ಪಡೆಯುತ್ತಿದ್ದಾರಂತೆ. ಈ ಕುರಿತು ಸ್ವತಃ ರಮ್ಯಾ ಅವರೇ ತಮ್ಮ ಇನ್ ಸ್ಟಾಗ್ರಾಂನಲ್ಲಿ ಕಾಲಿನ ಚಿತ್ರ ಹಾಕಿ ಬರೆದುಕೊಂಡಿದ್ದಾರೆ.

ಆಸ್ಟಿಯೋಕ್ಲ್ಯಾಟೋಮಾ ಎಂಬುದು ಒಂದು ಅಪರೂಪದ ಕಾಯಿಲೆಯಾಗಿದ್ದು, ಇದೀಗ ಮಾಜಿ ಸಂಸದೆ ಈ ರೋಗಕ್ಕೆ ತುತ್ತಾಗಿದ್ದಾರೆ. ಈ ಕಾಯಿಲೆ 10 ಲಕ್ಷ ಮಂದಿಯಲ್ಲಿ ಒಬ್ಬರಲ್ಲಿ ಕಾಣಿಸಿಕೊಳ್ಳುತ್ತದೆ.ದಿವ್ಯ ಸ್ಪಂದನ ಎಂಬ ಹುಡುಗಿ ಸ್ಯಾಂಡಲ್‍ವುಡ್‍ನಲ್ಲಿ ರಮ್ಯಾ ಆಗಿ ಬೆಳೆಯುವಲ್ಲಿ ಅಂಬಿ ಆಶೀರ್ವಾದವಿತ್ತು. ಅಲ್ಲದೇ ನಟಿಯಾಗಿದ್ದ ರಮ್ಯಾ ಮಂಡ್ಯದಲ್ಲಿ ಗೆದ್ದು ಸಂಸದೆಯಾಗಿದ್ದರು. ಆದರೆ ಅಂಬರೀಶ್ ನಿಧನಕ್ಕೆ ಕೇವಲ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದರು. ಇದರಿಂದ ಸಿಟ್ಟಿಗೆದ್ದ ಅಂಬಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ರಮ್ಯಾಗೆ ಛೀಮಾರಿ ಹಾಕಿದ್ದರು. ಅಲ್ಲದೇ ಮಂಡ್ಯದ ಜನತೆ ರಮ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೆಟ್ಟ ಕನಸುಗಳು ಬೀಳದಿರಲು ಹಾಗೂ ಸುಖ ನಿದ್ರೆ ಮಾಡಲು..! ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.

  • inspirational

    ಭವಿಷ್ಯವನ್ನು ಮುನ್ನಡೆಸಲು ಶಿಕ್ಷಣ ಅತ್ಯಗತ್ಯ

    ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…

  • ಉಪಯುಕ್ತ ಮಾಹಿತಿ

    ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

    ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…

  • ಸುದ್ದಿ

    ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

    ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…

  • Sports, ಕ್ರೀಡೆ

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
    ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.