ಸಿನಿಮಾ

ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

275

ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ.

ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಯುತ್ತಿತ್ತು. ಈ ವೇಳೆ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ಆದ್ದರಿಂದ ಬೆಂಗಳೂರು ಪೊಲೀಸರು ಬಿಗಿ ಭದ್ರತೆಯನ್ನು ಒದಗಿಸಿದ್ದರು. ಆಗ ಕಂಠೀರವ ಸ್ಟುಡಿಯೋದ ಗೇಟ್ ಬಳಿ ಜಯಪ್ರದಾ ಅವರು ನಿಂತಿದ್ದರು. ನೂಕುನುಗ್ಗಲು ಉಂಟಾಗುತ್ತಿದ್ದಂತೆ ಅಣ್ಣಾಮಲೈ, ಕಾರಿನಲ್ಲಿ ಕುಳಿತುಕೊಳ್ಳುವಂತೆ ಜಯಪ್ರದಾ ಅವರಿಗೆ ಸೂಚಿಸಿದ್ದಾರೆ.

ಡಿಸಿಪಿ ಅಣ್ಣಾಮಲೈ ಅವರು ಹೇಳಿದ್ದ ಮಾತನ್ನು ತಪ್ಪಾಗಿ ತಿಳಿದುಕೊಂಡ ನಟಿ ಜಯಪ್ರದಾ, ಸ್ಥಳದಲ್ಲಿಯೇ ಅವರ ವಿರುದ್ಧ ಕೂಗಾಡಿದ್ದಾರೆ. ಅಣ್ಣಾಮಲೈ ಡಿಸಿಪಿ ಆದರೆ ನಾನು ಮಾಜಿ ಸಂಸದೆಯಾಗಿದ್ದಾನೆ. ಅದರಲ್ಲೂ ನಾನೊಬ್ಬ ಮಹಿಳೆ. ನಮಗೆ ಭದ್ರತೆ ಒದಗಿಸಬೇಕು ಅವರು. ಯಾವುದೇ ತೊಂದರೆಯಾಗದಂತೆ ಭದ್ರತೆ ನೀಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಹೇಳುವ ಮೂಲಕ ಅಣ್ಣಾಮಲೈ ವಿರುದ್ಧ ಜಯಪ್ರದಾ ಕಿಡಿಕಾರಿದ್ದಾರೆ.ಇದಕ್ಕೆ ಈಗ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಇದ್ರಲ್ಲಿ ನಿಮ್ಮ ರಾಶಿಗಳು ಇವೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…

  • ಸುದ್ದಿ

    ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

    ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…

  • ವಿಜ್ಞಾನ

    ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

    ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು…

  • ಗ್ಯಾಜೆಟ್

    ಕೇವಲ 98 ರೂ..! ತನ್ನ ಗ್ರಾಹಕರಿಗೆ ಜಿಯೋ ಕೊಡ್ತು ಬಿಗ್ ಆಫರ್…

    ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ

  • ಸುದ್ದಿ

    ಬೆಂಗಳೂರಿನಲ್ಲಿ ದುಬಾರಿ ಬಡ್ಡಿಯನ್ನು ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ

    ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…