ರಾಜಕೀಯ, ಸಿನಿಮಾ

ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

536

ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರು. ಅದಾದ ನಂತರ ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ನಟಿ ರಮ್ಯಾ, ಮಂಡ್ಯದತ್ತ ಹೋಗುವುದೇ ಕಡಿಮೆಯಾಗಿತ್ತು. ಇತರೆ ಚುನಾವಣೆ ಸಂದರ್ಭಗಳಲ್ಲಿ ಮತದಾನಕ್ಕೂ ರಮ್ಯಾ ಹಾಜರಾಗಿರಲಿಲ್ಲ.

ಬಳಿಕ ಇದ್ದಕ್ಕಿದ್ದಂತೆ ಮಂಡ್ಯಕ್ಕೆ ಆಗಮಿಸಿದ ರಮ್ಯಾ ನಾನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದೆ. ಈಗ ವಿದ್ಯಾಭ್ಯಾಸ ಮುಗಿಸಿ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ನಾನು ನಿಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿ ಮಂಡ್ಯದಲ್ಲಿ ಎರಡನೇ ಬಾರಿಗೆ ಬಾಡಿಗೆ ಮನೆ ಮಾಡಿದ್ದರು.

ಮಂಡ್ಯದಲ್ಲಿ ನನಗೆ ರಾಜಕೀಯ ನೆಲೆಯಿಲ್ಲ ಎಂದು ಯೋಚಿಸಿದ ರಮ್ಯಾ ಈ ಹಿಂದೆಯೇ ಮಂಡ್ಯ ತೊರೆಯುವ ಯೋಚನೆ ಮಾಡಿದ್ದರು. ಇದೇ ವೇಳೆ, ಇತ್ತೀಚೆಗೆ ಪಾಂಡವಪುರ ತಾಲೂಕಿನ ಕನಗನಮರಡಿ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ್ದರೂ ಮಾಜಿ ಸಂಸದೆ ರಮ್ಯಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳುವ ಕಾರ್ಯಕ್ಕೆ ಮುಂದಾಗಿರಲಿಲ್ಲ.

ಜೊತೆಗೆ ಖ್ಯಾತ ಚಿತ್ರನಟ ಅಂಬರೀಶ್ ಸಾವನ್ನಪ್ಪಿದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕಾಗಲಿ ಅಥವಾ ಅಂತ್ಯ ಸಂಸ್ಕಾರಕ್ಕಾಗಲಿ ರಮ್ಯಾ ಬಾರದಿರುವುದು ಅಭಿಮಾನಿಗಳನ್ನು ಕೆರಳಿಸಿತ್ತು. ಇದರಿಂದ ಆಕ್ರೋಶಗೊಂಡ ಅಂಬಿ ಅಭಿಮಾನಿಗಳು ರಮ್ಯಾ ನಮ್ಮ ಪಾಲಿಗೆ ಸತ್ತಂತೆ ಎಂದು ಸಿಟ್ಟು ಹೊರಹಾಕಿದ್ರು.

ಈ ಎಲ್ಲಾ ಕಾರಣಗಳಿಂದ ಮಂಡ್ಯ ಜಿಲ್ಲೆಯ ಜನತೆಯ ಆಕ್ರೋಶಕ್ಕೆ ತುತ್ತಾಗಿರುವ ರಮ್ಯಾ, ಇದರಿಂದಾಗಿಯೇ ಸದ್ದುಗದ್ದಲವಿಲ್ಲದೆ ರಾತ್ರೋರಾತ್ರಿ ಮನೆ ಖಾಲಿ ಮಾಡಿದ್ದಾರೆಂದು ಮಾತನಾಡಿಕೊಳ್ಳಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ