ಸುದ್ದಿ

ರಾಮ ಭಂಟ ಆಂಜನೇಯನ ‘ಜಾತಿ’ ಪ್ರಮಾಣ ಪತ್ರಕ್ಕಾಗಿ ಅರ್ಜಿ!

104

ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ.

ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ.

ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ.

ಇದೆಲ್ಲದರ ಮಧ್ಯೆ ಶಿವಪಾಲ್ ಯಾದವ್ ನೇತೃತ್ವದ ಸಮಾಜವಾದಿ ಪಾರ್ಟಿ(ಲೋಹಿಯಾ) ವತಿಯಿಂದ ವಾರಣಾಸಿ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಲಾಗಿದ್ದು, ಹನುಮಂತ ದಲಿತ ಜಾತಿಗೆ ಸೇರಿದವನು ಎಂದು ಪ್ರಮಾಣೀಕರಿಸುವ ಜಾತಿ ಸರ್ಟಿಫಿಕೇಟ್ ನೀಡಬೇಕೆಂದು ಕೋರಿದೆ.

ಹನುಮಂತ ದಲಿತ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೇವರನ್ನು ಜಾತಿ ರಾಜಕಾರಣಕ್ಕೆ ಎಳೆದು ತಂದಿದ್ದಾರೆ. ಹೀಗಾಗಿ ನಾವು ಹನುಮಂತನ ಜಾತಿ ಸರ್ಟಿಫಿಕೇಟ್ ಕೋರಿ ಅರ್ಜಿ ಸಲ್ಲಿಸಿದ್ದೇವೆ ಎಂದು ಹೇಳಿರುವ ಪಕ್ಷದ ಮುಖಂಡ ಹರೀಶ್, ವಾರದೊಳಗೆ ಈ ಪ್ರಮಾಣ ಪತ್ರ ನೀಡದಿದ್ದರೆ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

    ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…

  • ಸುದ್ದಿ

    ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

    ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…

  • ರಾಜಕೀಯ, ಸುದ್ದಿ

    ಪ್ರಧಾನಿ ಮೋದಿ ಕುರಿತು, ನಿಮ್ಗೆ ಸೌಟ್‍ನಿಂದ ಹೊಡಿಬೇಕಾ?ಗ್ಯಾಸ್‍ನಿಂದ ಹೊಡಿಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ..!

    ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

  • ಸುದ್ದಿ

    ‘ಮೇಕಪ್ ಮಾಡದ ದೃಶ್ಯಗಳನ್ನೆ ಹೆಚ್ಚು ತೋರಿಸಿದ್ದಾರೆ’ ಎಂದ ಚೈತ್ರಾ ಹೇಳಿಕೆಗೆ ಸುದೀಪ್ ಗರಂ..!

    ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…

  • ವ್ಯಕ್ತಿ ವಿಶೇಷಣ

    ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.