ಸುದ್ದಿ

ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

199

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ ವಿಷ ಬೆರೆಸಿದ್ದ ಎನ್ನಲಾಗಿದೆ.

ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ದೊಡ್ಡಯ್ಯ, ಘಟನೆ ನಡೆದ ದಿನದಂದು ಪ್ರಸಾದಕ್ಕೆ ಕೀಟನಾಶಕ ಬೆರೆಸಿದ್ದ ಎಂದು ಹೇಳಲಾಗಿದ್ದು, ವಿಚಾರಣೆ ವೇಳೆ ಇದನ್ನು ಒಪ್ಪಿಕೊಂಡಿದ್ದಾನೆಂದು ತಿಳಿದುಬಂದಿದೆ.

ಪ್ರಸಾದ ಸೇವಿಸಿದ ಭಕ್ತರು ಅಸ್ವಸ್ಥರಾಗಿ ಬೀಳುತ್ತಿದ್ದಂತೆಯೇ ಗಾಬರಿಗೊಂಡಿದ್ದ ದೊಡ್ಡಯ್ಯ, ತಾನು ಪ್ರಸಾದ ಸೇವಿಸದಿದ್ದರೂ ಅಸ್ವಸ್ಥಗೊಂಡವನಂತೆ ನಾಟಕವಾಡಿ ಆಸ್ಪತ್ರೆಗೆ ದಾಖಲಾಗಿದ್ದನ್ನೆನ್ನಲಾಗಿದೆ. ಆದರೆ ವೈದ್ಯರು ಚಿಕಿತ್ಸೆ ನೀಡಲು ಮುಂದಾದ ವೇಳೆ ದೇಹದಲ್ಲಿ ಯಾವುದೇ ವಿಷದ ಅಂಶ ಕಂಡು ಬಂದಿರಲಿಲ್ಲ. ಇದರ ಮಾಹಿತಿ ಪಡೆದ ಪೊಲೀಸರು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆಂದು ಹೇಳಲಾಗಿದೆ.

ಪ್ರಸಾದ ತಯಾರಿಸಿದ್ದ ಪುಟ್ಟಸ್ವಾಮಿ ಎಂಬಾತನು ವಿಷ ಬೆರೆಸಿದ ಈ ಕೃತ್ಯದಲ್ಲಿ ಪಾಲುದಾರನೆಂದು ಹೇಳಲಾಗಿದ್ದು, ಯಾರಿಗೂ ಅನುಮಾನ ಬರಬಾರದೆಂಬ ಕಾರಣಕ್ಕೆ ಸ್ವಂತ ತನ್ನ ಮಗಳಿಗೆ ವಿಷ ಮಿಶ್ರಿತ ಪ್ರಸಾದವನ್ನು ತಿನ್ನಿಸಿ ಆಕೆಯ ಸಾವಿಗೆ ಕಾರಣವಾಗಿದ್ದನ್ನೆನ್ನಲಾಗಿದೆ.

ಬಳಿಕ ತಾನೂ ಪ್ರಸಾದ ಸೇವಿಸಿದವನಂತೆ ನಾಟಕವಾಡಿ ಆಸ್ಪತ್ರೆಗೆ ದಾಖಲಾಗಿದ್ದ. ಆತನನ್ನೂ ಈಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವಾಲಯಕ್ಕೆ ಬರುತ್ತಿದ್ದ ಭಾರೀ ಆದಾಯವೇ ಇಂತಹುದೊಂದು ಹೀನಕೃತ್ಯಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಮನೆಯಲ್ಲಿ ಕುಳಿತು ನೀವು ಈ ಕೆಲಸ ಮಾಡಿದ್ರೆ ಸಿಗುತ್ತೆ 1 ಲಕ್ಷ ರೂ..!ತಿಳಿಯಲು ಈ ಲೇಖನ ಓದಿ..

    ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…

  • ಸುದ್ದಿ

    ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

    ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲೇನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…