ರಾಜಕೀಯ

ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

470

ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ.

ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ ಸ್ಥಾನ ಸಿಗದೆ ಆಗಿರುವ ನಿರಾಶೆ.ಆದರೆ ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬುದು.

ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಆಗ ತಾವು ಯಾವುದೇ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಶರಣಾಗಿ ಜೆಡಿಎಸ್ ಮುಂದೆ ತಲೆ ಬಾಗಿತ್ತು. ಆದರೆ ಈಗ ಕಾಂಗ್ರೆಸ್ನಲ್ಲಿ ಅಸಮಾಧಾನ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಟದಿಂದ ಕುಮಾರಸ್ವಾಮಿ ಹಾಗೂ ಜೆಡಿಎಸ್ ರೋಸಿ ಹೋಗಿದೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಎದ್ದಿರುವ ಅತೃಪ್ತ ಬಂಡಾಯಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಭಾವಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಇಟ್ಟುಕೊಂಡು ಸಿದ್ದರಾಮಯ್ಯನವರು ಆಟವಾಡುತ್ತಿದ್ದಾರೆ ಎನ್ನಲಾಗುತ್ತಿದ್ದು ಸದ್ಯ ಕುಮಾರಸ್ವಾಮಿ ಇವರ ಸಾಹಸವೇ ಬೇಡ ಎಂದು ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರವಾಗಲಿ ದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನೆನ್ನೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಇದು ನಮ್ಮ ರಾಜ್ಯದ ಆಡಳಿತಕ್ಕೆ ಸಂಬಂಧಪಟ್ಟ ಹಾಗೆ ಅಲ್ಲ. ಹಾಗೆ ಒಂದು ವೇಳೆ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಸರ ಪರಿಹರಿಸಲು ಪ್ರಧಾನಿಯನ್ನು ಭೇಟಿ ಮಾಡಿದರೆ 15 ದಿನ ಮುಂಚೆಯೇ ಅದಕ್ಕೆ ಸಿದ್ಧತೆಯನ್ನು ಮಾಡಿಕೊಂಡು ದಾಖಲೆಯೊಂದಿಗೆ ದೆಹಲಿಗೆ ತೆರಳಬೇಕಾಗಿತ್ತು.

ಆದರೆ ಇದಾವುದೂ ಇಲ್ಲದೆ ಯಾವುದೇ ದಾಖಲೆಗಳು ಇಲ್ಲದೆ ಹಾಗೆ ಸುಮ್ಮನೆ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇವೆ ಎಂದು ದೆಹಲಿಗೆ ಹೋಗಿದ್ದೆ ಎಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮೋದಿಯನ್ನು ಭೇಟಿ ಮಾಡಿಕೊಂಡು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಹಾಗೂ ಮೈತ್ರಿಯನ್ನು ಹಿಂಪಡೆಯುತ್ತದೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ