ಸುದ್ದಿ

ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

421

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.

 ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ ಹಿಂದೆ ಜಗಳವಾಡಿಕೊಂಡು ಇಬ್ಬರು ಬೇರೆ ಬೇರೆಯಾಗಿ ವಾಸಿಸುತ್ತಿದ್ದರು.

ತನ್ನ ಗಂಡನಿಂದ ಬೇರೆಯಾದ ಬಳಿಕ ಭಾಗ್ಯಲಕ್ಷ್ಮಿ ಬೇರೆಯವರ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಆರೋಪಿ ರವಿ ತನ್ನ ಪತ್ನಿ ಇನ್ನೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ತಿಳಿದಿದೆ.

ರವಿ ಭಾನುವಾರ ಬೆಳಗ್ಗೆ ಪತ್ನಿಯ ಮನೆಗೆ ಹೋಗಿದ್ದಾನೆ. ಅಲ್ಲಿ ಭಾಗ್ಯಲಕ್ಷ್ಮಿ ಆಕೆಯ ಪ್ರಿಯತಮನ ಜೊತೆ ರೂಮಿನಲ್ಲಿ ಇದ್ದಳು. ಇದನ್ನು ನೋಡಿದ ರವಿ ರೂಮನ್ನು ಹೊರಗಿನಿಂದ ಲಾಕ್ ಮಾಡಿಕೊಂಡು ಮಕ್ಕಳನ್ನು ಮನೆಯಿಂದ ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ನಂತರ ರೂಮಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾನೆ.

ಇತ್ತ ಮಕ್ಕಳು ಈ ಬಗ್ಗೆ ನೆರೆಹೊರೆಯವರಿಗೆ ತಿಳಿಸಿದ್ದಾರೆ. ತಕ್ಷಣ ನೆರೆಹೊರೆಯವರು ಬಂದು ಬಾಗಿಲು ಮುರಿದು ಮನೆಯೊಳಗೆ ಹೋಗಿದ್ದಾರೆ. ಆಗ ಭಾಗ್ಯಲಕ್ಷ್ಮಿ ಗಂಭೀರವಾಗಿ ಸುಟ್ಟು ಹೋಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ