ಸುದ್ದಿ

ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಮಾಡಿದ್ದರ ಬಗ್ಗೆ ವೀರೇಂದ್ರ ಹೆಗ್ಗಡೆರವರು ಹೇಳಿದ್ದೇನು ಗೊತ್ತಾ?

205

ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ.

ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ.

ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.

44 ವರ್ಷ ಬಿಂದು ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, 42 ವರ್ಷದ ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ. ಮಹಿಳೆಯರ ಪ್ರವೇಶವನ್ನು ಖಚಿತಪಡಿಸಿದ ಕೇರಳ ಸಿಎಂ ಪಿಣಾರಯ್ ವಿಜಯನ್, ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದಾರೆ. ಅವರಿಗೆ ರಕ್ಷಣೆ ನೀಡಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಅವರು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

  • ಸರ್ಕಾರಿ ಯೋಜನೆಗಳು

    ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

    ‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…

  • ಸುದ್ದಿ

    ಬಿಗ್ಬಾಸ್ ಪ್ರಥಮ್, ಸಚಿವ ಯು.ಟಿ.ಖಾದರ್’ಗೆ ಕೊಟ್ಟ ಟಾಂಗ್ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

    ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…