ಸಿನಿಮಾ

ಐಟಿ ದಾಳಿ ವೇಳೆ ಪುನೀತ್ ರಾಜಕುಮಾರ್ ಮನೆ ಮುಂದೆ ಸಚಿವ ಡಿಕೆ.ಶಿವಕುಮಾರ್ ಬಂದಿದ್ದೇಕೆ ಗೊತ್ತಾ..?

668

ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು ಜಯಣ್ಣ ಅವರ ಮನೆಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆಹಾಕುತ್ತಿದ್ದಾರೆ.

ಗುರುವಾರ ಸ್ಯಾಂಡಲ್‍ವುಡ್ ಸ್ಟಾರ್ ಗಳ ಮನೆಗೆ ಲಗ್ಗೆ ಇಟ್ಟ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ಇಂದೂ ಮಂದುವರಿದಿದೆ. ಆದರೆ ಅಚ್ಚರಿ ಎಂಬಂತೆ ನಿನ್ನೆ ರಾತ್ರಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ನಟ ಪುನೀತ್ ರಾಜ್‍ಕುಮಾರ್ ಮನೆ ಮುಂದೆ ಪ್ರತ್ಯಕ್ಷವಾಗಿದ್ದರು.

ಪುನೀತ್ ರಾಜ್‍ಕುಮಾರ್ ಮನೆ ಬಳಿಯೇ ಸಚಿವರು ತಮ್ಮ ಕಾರಿನಿಂದ ಇಳಿದಿದ್ದಾರೆ. ಬಳಿಕ ಇನ್ನೂ ಮುಗಿದಿಲ್ವಾ ಅಂತ ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ. ನಂತರ ಏನೂ ಆಗೋದಿಲ್ಲ ತಲೆ ಕೆಡಿಸಿಕೊಳ್ಳಬೇಡಿ ಅಂತ ಅಪ್ಪು ಅಭಿಮಾನಿಗಳಲ್ಲಿ ಧೈರ್ಯ ತುಂಬಿ ನಡೆದುಕೊಂಡೇ ಮನೆಗೆ ಹೋಗಿದ್ದಾರೆ. ಇದಕ್ಕೂ ಮುನ್ನ ಡಿ.ಕೆ ಶಿವಕುಮಾರ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.

ಕನ್ನಡ ಚಿತ್ರರಂಗದಲ್ಲಿ ಬಹುಕೋಟಿ ಸಿನಿಮಾ ಮಾಡುವ ನಿರ್ಮಾಪಕರ ಮನೆಗಳ ಮೇಲೂ ಐಟಿ ರೇಡ್ ಮಾಡಿದ್ದರು. ಗುರುವಾರ ಬೆಳಗ್ಗೆ 6 ಗಂಟೆಗೆ ಶುರುವಾದ ದಾಳಿ, ರಾತ್ರಿ 11 ಗಂಟೆವರೆಗೂ ಮುಂದುವರಿದಿತ್ತು. ಕನ್ನಡ ಸಿನಿಮಾ ಇಂಡಸ್ಟ್ರಿಯನ್ನು ನಡುಗಿಸಿದ ಐಟಿ ದಾಳಿಗೆ ಹೈ ಬಜೆಟ್ಟಿನ ಮೂರು ಸಿನಿಮಾಗಳೇ ಕಾರಣ ಎನ್ನಲಾಗಿದೆ.



About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದಿನಕ್ಕೊಂದು ನೀತಿ ಕಥೆ

    ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.

  • ಸುದ್ದಿ

    ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

    ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…

  • ಸುದ್ದಿ

    ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಫರ್ ನೀಡಿದ ಹೈಕಮಾಂಡ್‍….!

    ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…

  • Home quarantine, Lockdown, Top News

    ಕ್ವಾರಂಟೀನ್ ನಲ್ಲಿದ್ದರೂ ಒಂದುಗೂಡಿ ನಮಾಜ್…!! ಮೂರ್ಖತನ

    ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
    ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿಭವಿಷ್ಯದಲ್ಲಿ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…