ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು.
ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ ಮಾತನಾಡಿದ ಗೂಳಿಹಟ್ಟಿ ಶೇಖರ್, ತಮ್ಮ ಕ್ಷೇತ್ರದಲ್ಲಿ ಆದ ಘಟನೆಯನ್ನು ವಿವರಿಸಿದರು.
ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಪ್ರತಿದಿನ ಸುಮಾರು 200 ಲೋಡ್ ಮರಳು ದೂರದ ಊರಿಗೆ ಅಕ್ರಮ ಸಾಗಾಣೆಯಾಗುತ್ತಿದೆ. ಒಂದು ಟ್ರಾಕ್ಟರ್ ಲೋಡ್ಗೆ 25 ಸಾವಿರದಂತೆ ಪೊಲೀಸರು ವಸೂಲಿ ಮಾಡುತ್ತಿದ್ದಾರೆ. ಅನೇಕ ಲಾರಿ ಮತ್ತು ಟ್ರಾಕ್ಟರ್ ಗಳನ್ನು ನಾನೇ ಖುದ್ದಾಗಿ ಹಿಡಿದಿದ್ದೇನೆ ಆದರೂ ಈ ದಂಧೆ ಮುಂದುವರೆಯುತ್ತಿದೆ ಎಂದರು.
ಬಡವರಿಗೆ ಮರಳೇ ಸಿಕ್ಕುತ್ತಿಲ್ಲ. ಸರ್ಕಾರದ ಕೆಲಸಕ್ಕೂ ಮರಳು ಇಲ್ಲ, ದೇವಸ್ಥಾನ ಕಟ್ಟಲು ಮರಳು ಸಿಗುತ್ತಿಲ್ಲ. ಸ್ಥಳೀಯರು ಇದರಿಂದ ಕೆಲಸ ಕಳೆದುಕೊಂಡು ಗುಳೇ ಹೋಗುತ್ತಿದ್ದಾರೆ. ಹೋಗಲಿ ಸಣ್ಣ ಹಳ್ಳ ಅಥವಾ ಮನೆ ಬಾಗಿಲಿನಿಂದ ಹರಿದ ನೀರಿನಿಂದ ಉಂಟಾದ ಮರಳನ್ನು ಕೂಡ ಬಡವರು ತೆಗೆದುಕೊಳ್ಳಲು ಈ ಅಧಿಕಾರಿಗಳು ಬಿಡುತ್ತಿಲ್ಲ.
ಸುಳ್ಳು ಕೇಸುಗಳನ್ನು ಬಡವರ ಮೇಲೆ ಅನ್ಯಾಯವಾಗಿ ಹಾಕಲಾಗುತ್ತಿದೆ. ಆದರೆ ಉಳ್ಳವರು ಮಾತ್ರ ತಮಗೆ ಬೇಕಾದಷ್ಟು ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಇದು ತಮಗೆ ನೋವುಂಟು ಮಾಡಿದೆ ಎಂದು ಗೂಳಿಹಟ್ಟಿ ಶೇಖರ್ ಈಶ್ವರಪ್ಪನವರ ಹತ್ತಿರ ಹೇಳಿಕೊಂಡರು.
ಇದರಿಂದ ಬೇಸತ್ತ ತಾವು ತಮ್ಮ ಬೆಂಬಲಿಗರಿಗಾದ ಅನ್ಯಾಯ ಖಂಡಿಸಿ ಬಡವರಿಗೆ ಮರಳು ಸಿಗದಿರುವುದನ್ನು ವಿರೋಧಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದೆ ಅಷ್ಟೆ. ಮರಳನ್ನು ಕೂಡ ನೀಡದ ಈ ಸರ್ಕಾರಕ್ಕೆ ಏನು ಹೇಳಬೇಕೋ ತಮಗೆ ಗೊತ್ತಿಲ್ಲ. ಇದುವರೆಗೂ ಸುಮಾರು 500ಕ್ಕೂ ಹೆಚ್ಚು ಬಡವರನ್ನು ಜೈಲಿಗೆ ಕಳಿಸಲಾಗಿದೆ. ಹೀಗೆ ಸುಳ್ಳು ಸುಳ್ಳು ಕೇಸು ಹಾಕುವುದನ್ನು ಅಧಿಕಾರಿಗಳು ನಿಲ್ಲಿಸಬೇಕು ಎಂದರು.
ಅಕ್ರಮವಾಗಿ ಮರಳು ಸಾಗಾಣೆ ಮಾಡುವವರನ್ನು ಬಿಟ್ಟು ಪರ್ಮಿಟ್ ಇದ್ದವರ ವಿರುದ್ದವೇ ಕೇಸು ದಾಖಲಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಅಧಿಕಾರಿಗಳು ಉದ್ದಟತನದ ಮಾತನಾಡುತ್ತಾರೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ ನಾನು…
ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.