ಸಿನಿಮಾ

ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

186

ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ.

ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದನು.

ಮನೆಗೆ ಆಗಮಿಸಿದರೂ ಭೇಟಿಗೆ ಅವಕಾಶ ಸಿಗದಕ್ಕೆ ಯಶ್ ನಿವಾಸದ ಮುಂಭಾಗದಲ್ಲೇ ಪೆಟ್ರೋಲ್ ಸುರಿದುಕೊಂಡು ರವಿ ಆತ್ಮಹತ್ಯೆಗೆ ಯತ್ನಿಸಿದ್ದನು. ತಕ್ಷಣವೇ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.

ತಮ್ಮ ಅಭಿಮಾನಿ ಆತ್ಮಹತ್ಯೆಗೆತ್ನಿಸಿದ್ದರ ಕುರಿತ ಮಾಹಿತಿ ತಿಳಿದ ನಟ ಯಶ್, ಮಂಗಳವಾರದಂದು ಆಸ್ಪತ್ರೆಗೆ ತೆರಳಿ ರವಿ ಅವರ ಆರೋಗ್ಯ ವಿಚಾರಿಸಿ, ರವಿಯವರ ಕುಟುಂಬದವರೊಂದಿಗೆ ಮಾತನಾಡಿದ್ದರು. ಇದೀಗ ರವಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • ಸುದ್ದಿ

    ಬಿಹಾರ ರೈತರ ನಿದ್ದೆಗೆಡಿಸಿದ ಬಾನುಗಲ್ಲು….! ಕಾರಣ ಏನು?

    ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್‌ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • ಸಂಬಂಧ

    ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದ ತಂದೆ ತಾಯಿಗೆ ಮದುವೆ ಮಾಡಿಸಿದ ಮಕ್ಕಳು ಮತ್ತು ಮೊಮ್ಮಕ್ಕಳು!ಶಾಕ್ ಆಗ್ತೀರಾ, ಈ ಲೇಖನಿ ಓದಿ…..

    ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.

  • ಸರ್ಕಾರಿ ಯೋಜನೆಗಳು

    ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

    ‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…