ಸುದ್ದಿ

ನಡೆದಾಡುವ ದೇವರ ಆರೋಗ್ಯ ಗಂಭೀರ!ಚಿಕಿತ್ಸೆ ಫಲಕಾರಿ ಆಗತ್ತೋ ಇಲ್ವೋ ಎಂದ ಡಾ. ಪರಮೇಶ್?

127

ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ.

ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ.

ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ ಅವರು ಇದ್ದಾರೆ. ಹೀಗಾಗಿ ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆಗಳನ್ನು ಕೊಡುತ್ತಲೇ ಇದ್ದೇವೆ. ಸದ್ಯ ಬೇರೆ ವೈದ್ಯರು ಬಂದಿಲ್ಲ ಎಂದು ತಿಳಿಸಿದರು.

ಇನ್ನು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಶ್ರೀಗಳು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬೆಳಗಿನ ಜಾವ ಸುಮಾರು 4 ಗಂಟೆಗೆ ಶ್ರೀಗಳಿಗೆ ರಕ್ತದ ಒತ್ತಡ ಮತ್ತು ಉಸಿರಾಟದಲ್ಲಿ ಕೊಂಚ ಏರುಪೇರು ಕಂಡು ಬಂದಿದ್ದು, ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೂ ಮತ್ತೆ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡು ಬಂದಿದೆ.

ಈಗ ಶ್ರೀಗಳಿಗೆ ಕೃತಕ ಉಸಿರಾಟ ನೀಡಲಾಗುತ್ತಿದೆ. ಆದರೆ ಶ್ರೀಗಳಿಗಳಿಗೆ ನಿಶ್ಯಕ್ತಿ ತುಂಬಾ ಕಡಿಮೆ ಇದ್ದು, ಕಳೆದ ದಿನ ಆರ್ಯುವೇದಿಕ್ ಚಿಕಿತ್ಸೆ ನೀಡಲಾಗಿದೆ. ಈಗ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಮಠಕ್ಕೆ ನಿಯೋಜನೆ ಮಾಡಲಾಗಿದೆ.

ಕೆಲ ದಿನಗಳ ಹಿಂದೆ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ತಮ್ಮನ್ನು ನೋಡಲು ಬಂದ ಭಕ್ತರನ್ನು ಕಣ್ತೆರೆದು ವೀಕ್ಷಿಸಿದ್ದರು. ಅಷ್ಟೇ ಅಲ್ಲದೆ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಶ್ರೀಗಳ ಪಾದ ಸ್ಪರ್ಶಿಸಿ ನಮಸ್ಕರಿಸಿದ ವೇಳೆ ಕಣ್ಣು ತೆರೆದು ಮುಗುಳ್ನಕ್ಕಿದ್ದರು. ಕಿರಿಯ ಶ್ರೀಗಳ ಸಹಾಯದೊಂದಿಗೆ ಇಷ್ಟಲಿಂಗ ಪೂಜೆಯಲ್ಲಿ ನಡೆದಾಡುವ ದೇವರು ಭಾಗಿಯಾಗಿ, ಅವರ ಪಕ್ಕದಲ್ಲೇ ಕುಳಿತು ಕಿರಿಯ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಒಂದು ಫೋಟೋಗಾಗಿ ಮದುವೆಮನೆಯಲ್ಲೇ ಕಿತ್ತಾಡಿಕೊಂಡ ವಧು ವರರು!ಆಮೇಲೆ ಏನಾಯ್ತು ಗೊತ್ತಾ???

    ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.