ಸುದ್ದಿ

ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

187

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.

ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.

ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ದರ್ಶನ ಪಡೆಯುವ ಭಕ್ತರಿಗಿ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ನೀಡಲಾಗುವುದು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

    ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…

  • ಸಿನಿಮಾ

    ಕನ್ನಡದಲ್ಲಿ ಆರ್ಭಟಿಸುತ್ತಿರುವ ಕಾಲೇಜ್ ಕುಮಾರ್ ಟ್ರೈಲರ್..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

  • ಆರೋಗ್ಯ

    ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

    ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…