ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ.
ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ.
ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು ರಾತ್ರಿ ಬರುತ್ತೀಯಾ. ಆದರೆ ಈ ವಿಚಾರ ನಮ್ಮಿಬ್ಬರ ನಡುವೆಯೇ ಇರಲಿದೆ. ಕೇವಲ ಒಂದು ಗಂಟೆಗೆ ಎರಡು ಲಕ್ಷ ಕೊಡುವೆ” ಎಂದು ನಟಿ ಗಾಯತ್ರಿ ಅರುಣ್ ಗೆ ಸಂದೇಶ ಕಳುಹಿಸಿದ್ದನು.
ರೋಹನ್ ಕುರಿಯಾಕೋಸ್ ಸಂದೇಶಕ್ಕೆ ಪ್ರತಿಕ್ರಿಯಿಸಿದ ನಟಿ, “ಮಿಸ್ಟರ್ ರೋಹನ್ ಕುರಿಯಾಕೋಸ್… ನಿನ್ನ ತಾಯಿ ಹಾಗೂ ಸಹೋದರಿಯ ಸುರಕ್ಷತೆ ಬಗ್ಗೆ ಪ್ರಾರ್ಥಿಸಿಕೊಳ್ಳಲು ಖಂಡಿತವಾಗಿ ನಾನು ನೆನಪಿಸಿಕೊಳ್ಳುವೆ” ಎಂದು ತಿರುಗೇಟು ಕೊಟ್ಟಿದ್ದಾರೆ.ನಟಿ ಗಾಯತ್ರಿ ಅರುಣ್ ಮಲಯಾಳಂ ನ ‘ಪರಸ್ಪರಂ’ ಧಾರಾವಾಹಿಯಲ್ಲಿ ಅಭಿನಯಿಸಿದ್ದು, ಜನಪ್ರಿಯತೆ ಗಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…