ಸುದ್ದಿ

ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

104

ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು.

ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಎನ್.ಕೆ ಭಟ್ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ.ಹೆಣ್ಣುಮಕ್ಕಳು ಬೆಂಗಳೂರಿನಲ್ಲಿರುವ ಅದರಲ್ಲೂ ಐಟಿ ವಿಭಾಗದಲ್ಲಿ ಕೆಲಸ ಮಾಡುವ ವರನನ್ನು ಮದುವೆಯಾಗಲು ಹೆಚ್ಚಿನ ಆದ್ಯತೆ ನೀಡುತ್ತಾರೆ, ಹೀಗಾಗಿ ರೈತ ವರನಿಗೆ ವಿವಾಹಕ್ಕೆ ವಧು ಸಿಗುತ್ತಿಲ್ಲ, ಈ ಯೋಜನೆಗಳಿಗೆ ಕೆಲಸವು ಷರತ್ತುಗಳನ್ನು ವಿಧಿಸಲಾಗಿದೆ.

ವಿವಾಹವಾಗುತ್ತಿರುವ ಜೋಡಿಯ ಕುಟುಂಬದ ಒಬ್ಬ ಸದಸ್ಯರು ಸೊಸೈಟಿಯ ಸದಸ್ಯರಾಗಿರಬೇಕು,  ವಾರ್ಷಿಕವಾಗಿ ಸುಮಾರು 3 ಲಕ್ಷ ರು.ವಹಿವಾಟು ತೋರಿಸಬೇಕು, ಈ ಆಫರ್ ಎಲ್ಲಾ ಜಾತಿಯ ಜನರಿಗೂ ಅನ್ವಯವಾಗುತ್ತಿದೆ, ಯಾಲ್ಲಾಪುರ ತಾಲೂಕಿನ 22 ಗ್ರಾಮಗಳಿಗೂ ಈ ಆಫರ್ ಸಿಗಲಿದೆ.

ಸೊಸೈಟಿಯಲ್ಲಿ ಸುಮಾರು 2ಸಾವಿರ ಸದಸ್ಯರಿದ್ದಾರೆ, ಉತ್ತಮ ಕುಟುಂಬದ ರೈತರ ಮಕ್ಕಳಿಗೂ ಕೆಲವೊಂದು ವೇಳೆ ವಧು ಸಿಗುತ್ತಿಲ್ಲ,  ಹೀಗಾಗಿ ಈ ಆಫರ್ ನೀಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ರೆಡಿಯಾಯ್ತು ದೇಶದ ಅತ್ಯಂತ ದೊಡ್ಡದಾದ ಮೆಟ್ರೋ ನಿಲ್ದಾಣ…

    ಕೆಂಪೇಗೌಡ ಇಂಟರ್‌ಚೇಂಜ್‌  ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • ಸುದ್ದಿ

    ಮೈಸೂರು ದಸರಾ ವೇದಿಕೆಯಲ್ಲೇ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆದ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಶೆಟ್ಟಿ ಹಾಗು ನಿವೇದಿತಾ….!

    ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

    ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.

  • ಉಪಯುಕ್ತ ಮಾಹಿತಿ

    ಒಡೆದ ಹಾಲನ್ನು ಬಿಸಾಡುವ ಬದಲು, ಮತ್ತೆ ಅದರಿಂದ ಏನೆಲ್ಲಾ ಮಾಡಬಹುದು ನೋಡಿ…

    ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….