ಸುದ್ದಿ

ಸರ್ಕಾರಿ ಶಾಲೆ ಒಂದರಲ್ಲಿ ಬಿಸಿ ಊಟದಲ್ಲಿ ಹಾವು ಪತ್ತೆ…ಎಲ್ಲಿ ಗೊತ್ತೇ?

437

ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ.
ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್ ಜಿಲ್ಲಾ ಪರಿಷದ್ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ನಾಂದೇಡ್​​ನಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಶಾಲೆಯಲ್ಲಿ 80 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.ಪ್ರತಿ ದಿನವೂ ಈ ಶಾಲೆಗೆ ಸರ್ಕಾರೇತರ ಸಂಸ್ಥೆಯೊಂದು ಬಿಸಿಯೂಟ ಕಳುಹಿಸುತಿತ್ತು. ಆದರೆ ಅಂದು ಮಾತ್ರ ಶಾಲಾ ಸಿಬ್ಬಂದಿ ಗಳು ಊಟಾ ಬಡಿಸಲು ಪ್ರಾರಂಭಿಸಿದಾಗ ಕಿಚಡಿಯಲ್ಲಿ ಹಾವು ಇರುವುದು ಕಂಡು ಬಂದಿದೆ.

ತಕ್ಷಣ ಅವರು ಹಿರಿಯ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಮತ್ತು ಯಾವ ಮಕ್ಕಳಿಗೂ ಈ ಹಾವು ಬಿದ್ದಿದ್ದ ಊಟ ನೀಡಿಲ್ಲ.ತಕ್ಷಣವೇ ಸ್ಥಳಕ್ಕೆ ನಾಂದೇಡ್ ಜಿಲ್ಲಾ ಶಿಕ್ಷಣಾಧಿಕಾರಿಗಳಾದ ಪ್ರಶಾಂತ್ ಅವರು ಭೇಟಿ ನೀಡಿದ್ದಾರೆ. ಈ ಕುರಿತು ಮಾಹಿತಿ ಪಡೆದು ತಕ್ಷಣ ತನಿಕೆ ನಡೆಯಬೇಕೆಂದು ಆದೇಶ ನೀಡಿದ್ದಾರೆ. ಅಂತೂ ಮಕ್ಕಳು ಮಾತ್ರ ಅಪಾಯದಿಂದ ಪಾರಾಗಿದ್ದಾರೆ.

ಮಹಾರಾಷ್ಟ್ರ ಸರ್ಕಾರವೂ ಸಹ ಇದರ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಅಲ್ಲಿಯ ವ್ಯವಸ್ಥೆ ಗಳಿಗೆ ಹೋಲಿಸಿದರೆ ನಮ್ಮ ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ನೀಡುವ ಬಿಸಿ ಊಟ ದ ವ್ಯವಸ್ಥೆ ಅಚ್ಚುಕಟ್ಟಾಗಿ, ಸುವ್ಯವಸ್ಥಿತವಾಗಿದೆ. ಇನ್ನು ಪೋಷಕರು ಮತ್ತು ಶಿಕ್ಷಕರು ಮಕ್ಕಳ ಊಟ ದ ವಿಚಾರದಲ್ಲಿ ಹೆಚ್ಚಿನ ಕಾಳಜಿ ವಹಿಸುವುದು ಅತ್ಯಗತ್ಯ ವಾಗವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಕ್ರೀಡೆ

    ವೈರಲ್ ಆಯ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ, ತನ್ನ ಮಗುವಿನೊಂದಿಗೆ ಇರುವ ಫೋಟೋ..!ಮಗು ಹೇಗಿದೆ ಗೊತ್ತಾ..?

    ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…

  • ಸ್ಪೂರ್ತಿ

    ಆಟೋದಲ್ಲಿ ಸಿಕ್ಕ 80,000 ರೂಪಾಯಿಗಳನ್ನು ಮರಳಿಸಿದ್ದ ಡ್ರೈವರ್’ಗೆ ಆಕೆ ನೀಡಿದ್ದು ಏನು ಗೊತ್ತಾ..?ತಿಳಿಯಲು ಇದನ್ನು ಓದಿ…

    ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.

  • ಸುದ್ದಿ

    ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿಗಳ ಮೃತದೇಹ ಪತ್ತೆ…ಕಾರಣ ಏನು ಗೊತ್ತಾ?

    ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….

  • ಸುದ್ದಿ

    ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

    ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…