ಉಪಯುಕ್ತ ಮಾಹಿತಿ

ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯೇ?ಹಾಗಿದ್ದರೆ ಈ ಯೋಜನೆಯಿಂದ ನಿಮಗೆ ಸಿಗುತ್ತೆ 2000!ಈಗಲೇ ಈ ಮಾಹಿತಿ ನೋಡಿ

428

ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ. ಮೊದಲ ಕಂತಿನ ಹಣ ಆಧಾರ್ ಇಲ್ಲದೆ ಸಿಗಲಿದೆ. ಆದ್ರೆ ಎರಡನೇ ಕಂತಿನ ಹಣ ಪಡೆಯುವ ಮೊದಲು ರೈತ ಆಧಾರ್ ಕಾರ್ಡ್ ನೀಡಬೇಕಾಗುತ್ತದೆ. ಈವರೆಗೂ ಆಧಾರ್ ಕಾರ್ಡ್ ಹೊಂದಿರದ ರೈತರು ತಕ್ಷಣ ಆಧಾರ್ ಕಾರ್ಡ್ ಮಾಡಿಸಿಕೊಂಡಲ್ಲಿ ಯೋಜನೆ ಲಾಭ ಪಡೆಯಬಹುದಾಗಿದೆ.

ಆಧಾರ್ ಕಾರ್ಡ್ ಪಡೆಯುವುದು ದೊಡ್ಡ ಕೆಲಸವೇನಲ್ಲ. ವೆಬ್ ಸೈಟ್ ನಲ್ಲಿ ನಿಮಗೆ ಫಾರ್ಮ್ ಸಿಗಲಿದೆ. https://appointments.uidai.gov.in ವೆಬ್ ಸೈಟ್ ಗೆ ಹೋಗಿ ನೀವು ಫಾರ್ಮ್ ಡೌನ್ಲೋಡ್ ಮಾಡಿಕೊಳ್ಳಬೇಕು. ಫಾರ್ಮ್ ಭರ್ತಿ ಮಾಡಿ, ಅಗತ್ಯವಿರುವ ದಾಖಲೆಗಳನ್ನು ನೀಡಬೇಕಾಗುತ್ತದೆ. ಇದೇ ವೆಬ್ ಸೈಟ್ ನಲ್ಲಿ ಹತ್ತಿರ ಯಾವ ಯಾವ ಆಧಾರ್ ಕಾರ್ಡ್ ಸೆಂಟರ್ ಇದೆ ಎಂಬ ಮಾಹಿತಿ ಸಿಗಲಿದೆ. ಅಲ್ಲಿಗೆ ಹೋಗಿ ಅರ್ಜಿ ಜೊತೆ ದಾಖಲೆ ನೀಡಿ ಆಧಾರ್ ಗೆ ಅರ್ಜಿ ಸಲ್ಲಿಸಬಹುದು.

ಆಧಾರ್ ಕಾರ್ಡ್, ಅಂಚೆ ಕಚೇರಿ ಮೂಲಕ ನಿಮ್ಮ ಮನೆಗೆ ಬರಲಿದೆ. ಒಂದು ವೇಳೆ ಅಂಚೆ ಕಚೇರಿ ಮೂಲಕ ಆಧಾರ್ ಕಾರ್ಡ್ ಮನೆಗೆ ಬರದೆ ಹೋದಲ್ಲಿ ವೆಬ್ ಸೈಟ್ ನಲ್ಲಿರುವ ಆಧಾರ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಸುನಿಲ್ ನಾಯ್ಕರಿಂದ ಉಚಿತ ಬೈಸಿಕಲ್ ವಿತರಣೆ

    ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…

  • Uncategorized, ರಾಜಕೀಯ

    ತಾಜ್‌ ಮಹಲ್‌ ನಿರ್ಮಿಸಿದವರು ದ್ರೋಹಿಗಳು ಎಂದು ಹೇಳಿದ ಶಾಸಕ..!ತಿಳಿಯಲು ಈ ಲೇಖನ ಓದಿ..

    ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…

  • ಸುದ್ದಿ

    ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

    ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…

  • ಸಿನಿಮಾ

    ಮಂಡ್ಯದ ಗಂಡು ತಮ್ಮ ಹುಟ್ಟುಹಬ್ಬದಲ್ಲಿ ಅಭಿಮಾನಿಗಳಿಗೆ ಹೇಳಿದ್ದಾದರೂ ಏನು ???

    ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್‍ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.