ಸುದ್ದಿ

ಬ್ರೆಕಿಂಗ್ ನ್ಯೂಸ್!ಇನ್ನು ಮುಂದೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಸಿಗಲಿದೆ ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಭಾಗ್ಯ…

149

ಶಬರಿಮಲೈ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ.

ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಎಲ್ಲಾ ಸ್ತ್ರೀಯರಿಗೆ ಪ್ರವೇಶಕ್ಕೆ ಅವಕಾಶ ನೀಡುತ್ತೇವೆ ಎಂದು ಹೇಳಿಕೆ ನೀಡಿದೆ.

ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ಕೊಡುವ ಸುಪ್ರೀಂಕೋರ್ಟ್ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ 54 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್, ಎ.ಎಂ.ಖಾನ್ವಿಲ್ಕರ್, ಡಿ.ವೈ.ಚಂದ್ರಚೂಡ್ ಹಾಗೂ ಇಂದೂ ಮಲ್ಹೋತ್ರಾ ಅವರ ಪೀಠವು ಮರಪರಿಶೀಲನಾ ಅರ್ಜಿಯನ್ನು ಇಂದು ವಿಚಾರಣೆ ನಡೆದಿದರು.

ಕೇರಳ ಸರ್ಕಾರದ ಅಧೀನದಲ್ಲಿ ನಡೆಯುವ ಶಬರಿಮಲ ದೇವಸ್ಥಾನ ಮಂಡಳಿಯು 2018 ಸೆಪ್ಟೆಂಬರ್ ನಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿತ್ತು. ಬಳಿಕ ನವೆಂಬರ್ ವರೆಗೆ ನಿರ್ಧಾರ ಕೈಗೊಳ್ಳಲು ಕಾಲಾವಕಾಶ ಕೇಳಿತ್ತು. ಆದರೆ ಈಗ ದೇವಸ್ಥಾನಕ್ಕೆ ಮಹಿಳೆಯರಿಗೆ ಯಾವುದೇ ವಯೋಮಿತಿ ಇಲ್ಲ. ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗುತ್ತದೆ ಎಂದು ಒಪ್ಪಿಕೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಧನಲಾಭ..ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…

  • inspirational

    ಪ್ರಯಾಣಿಕರ ಉಪಯೋಗಕ್ಕಾಗಿ ಆಟೋವನ್ನೇ ಮನೆಯಂತೆ ಮಾಡಿದ ಚಾಲಕ ಸಿಗುತ್ತೆ ಹಲವು ಸೌಲಭ್ಯ..!

    ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…

  • ಸುದ್ದಿ

    ಕಾಡಿನ ನಾಶವಾಗುತ್ತಿರುವ ಹಿನ್ನೆಲೆ ಬಗ್ಗೆ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹೇಳಿದ್ದೇನು..?

    ನೀರಿನ  ಸಂರಕ್ಷಣೆಗಾಗಿ ನ್ಯೂಸ್ ​18 ಹಮ್ಮಿಕೊಂಡಿರುವ  #Mission Paani ಆಂದೋಲನ  ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್​ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….

  • ಸುದ್ದಿ

    ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

    ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…

  • ರಾಜಕೀಯ

    ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

    ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

  • ಸ್ಪೂರ್ತಿ

    ಬದುಕನ್ನು ವ್ಯರ್ಥ ಮಾಡಬೇಡಿ, ಸಮಯವನ್ನು ಅರ್ಥ ಮಾಡಿಕೊಂಡು ಬದುಕಿ ರವಿ ಚನ್ನಣ್ಣನವರ್.

    ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….