ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ ದೇಬ್, ತಮ್ಮ ಮಹಿಳಾ ಸಹೋದ್ಯೋಗಿ ಸಮಾಜ ಕಲ್ಯಾಣ ಸಚಿವೆ ಸಂತನಾ ಚಕ್ಮಾ ಅವರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ. ಇದರಿಂದ ಇರುಸುಮುರುಸು ಸಂತನಾ ಕೈ ತಳ್ಳಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಅಂತೆ ಪ್ರತಿಪಕ್ಷಗಳು ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿವೆ. ಈ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಕೂಡಾ ಪಾಲ್ಗೊಂಡಿದ್ದು, ಈ ಘಟನೆಯಿಂದ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಘಟನೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಮನೋಜ್ ಕಾಂತಿ ದೇಬ್ ಆರೋಪವನ್ನು ನಿರಾಕರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…