ಸುದ್ದಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

545


ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ.

ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿತ್ತು. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಕೆಎಸ್‍ಆರ್ ಟಿಸಿ ನಿಗಮದಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಮಾರ್ಚ್ 1 ರಿಂದ 18 ರವೆಗೆ ಮಾತ್ರ ಈ ಸೌಲಭ್ಯವಿರುತ್ತದೆ ಎಂದು ಕೆಎಸ್‍ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ಪರೀಕ್ಷೆ ಮುಗಿದ ಬಳಿಕ ಮತ್ತೆ ಅಲ್ಲಿಂದ ವಾಸಸ್ಥಳಕ್ಕೆ ಹಿಂದಿರುಗಬಹುದು. ವಿದ್ಯಾರ್ಥಿಗಳು ಬಸ್ ಹತ್ತಿದ ಮೇಲೆ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿದರೆ ಉಚಿತವಾಗಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಈ ಟೈಮ್’ನಲ್ಲಿ ಇವರಿಗೆ ಫ್ರೆಂಡ್ಸ್ ಬೇಕಾಗಿಲ್ಲ,ಹೊಟ್ಟೆಹುರಿ ಬಗ್ಗೆ ಹೇಳಾನ್ಗಿಲ್ಲ..!ಏನ್ ಗೊತ್ತಾ..?ಮುಂದೆ ಓದಿ…

    ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

    ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.   ಅಂಬರೀಶ್ ಅವರ ಹಾಗೆ…

  • ಸಿನಿಮಾ

    KGF ಚಿತ್ರದ ಬಗ್ಗೆ ಪುನೀತ್ ರಾಜ್ ಸೇರಿದಂತೆ ಕನ್ನಡದ ಸ್ಟಾರ್ ನಟರು ಹೇಳಿದ್ದೇನು ಗೊತ್ತಾ..!

    ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಆರೋಗ್ಯ

    ಬಿಳಿಕೂದಲುನಿಂದ ತುಂಬಾ ಅವಮಾನಿತರಾಗಿದ್ದೀರಾ?ತಲೆಕೆಡಿಸ್ಕೊಬೇಡಿ!ಇಲ್ಲಿದೆ ಸುಲಭ ಮನೆಮದ್ದು…..

    ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.