ರಾಜಕೀಯ

ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

212

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ.

ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರ ದೇಶಭಕ್ತಿಯನ್ನ ಯಾರಿಂದಲೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಅದೇ ರೀತಿಯಾಗಿ ಸಮಾಜಮುಖಿಯಾಗಿ, ಸಮಾಜದ ಪರವಾಗಿ ಹಾಗೂ ಸಮಾಜಕೋಸ್ಕರ ಹೋರಾಟ ಮಾಡುವ ಬಹಳಷ್ಟು ತ್ಯಾಗಮಯಿ ರಾಜಕಾರಣಿಗಳಿದ್ದಾರೆ. ಅವರಿಂದಲೇ ಅಲ್ಪ ಸ್ವಲ್ಪ ನ್ಯಾಯ ನಮ್ಮ ಬಡವರಿಗೆ ಹಾಗೂ ರೈತರಿಗೆ ಸಿಗುತ್ತಿದೆ. ಸಿಎಂ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದು ಸುಳ್ಳಲ್ಲ. ಅವರು ಯಾರಿಗೂ ಮೋಸ ಮಾಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಯೋಜನೆಗಳನ್ನ ಮರೆಯುವಂತಿಲ್ಲ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿ ಹೇಳಿಕೆ ನೀಡಿರುವುದು ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಶಾಸಕಿ ಹೆಬ್ಬಾಳ್ಕರ್ ಮೋದಿಯನ್ನ ಹೊಗಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರಥಸಪ್ತಮಿ ಮಹತ್ವ?

    *ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…

  • ಸುದ್ದಿ

    ಟಿಕ್ ಟಾಕ್ ಖಾತೆ ಡಿಲಿಟ್ ಮಾಡಿ ದೇಶಪ್ರೇಮ ತೋರಿದ ಚಾಲೆಂಜಿಂಗ್ ಸ್ಟಾರ್. ಅಭಿಮಾನಿಗಳು ಖಾತೆ ಡಿಲೀಟ್.

    ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….

  • ಸುದ್ದಿ

    SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

    ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…

  • ವಿಚಿತ್ರ ಆದರೂ ಸತ್ಯ

    ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

    ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ

  • ಗ್ಯಾಜೆಟ್

    ನೀವು ನಿಮ್ಮ ಐಫೋನ್ ‘ನನ್ನು ಕಳೆದುಕೊಂಡಿದ್ದಿರಾ ಹಾಗದ್ರೆ ಹುಡುಕುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?

  • ಆರೋಗ್ಯ

    ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ…!

    ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…